Breaking News

‘ಪೆರಿಯಶಾಂತಿಯಲ್ಲಿ ಮೇಲ್ಸೇತುವೆ’ ತಾ.ಪಂ.ಸದಸ್ಯೆ ಕೆ.ಟಿ.ವಲ್ಸಮ್ಮರಿಂದ ಸಿಎಂಗೆ ಮನವಿ

Puttur_Advt_NewsUnder_1
Puttur_Advt_NewsUnder_1

periyaಕಡಬ: ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೆರಿಯಶಾಂತಿಯಲ್ಲಿ ಮೇಲ್ಸೇತುವೆ ನಿರ್ಮಾಣ ಹಾಗೂ ಇಚ್ಲಂಪಾಡಿಯಿಂದ ಪೆರಿಯಶಾಂತಿ ತನಕ ರಾಜ್ಯ ಹೆದ್ದಾರಿ ಅಗಲೀಕರಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ತಾ.ಪಂ.ಸದಸ್ಯೆ ಕೆ.ಟಿ ವಲ್ಸಮ್ಮರವರು ಅ.೯ರಂದು ಕೊಯಿಲಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಸಿದ್ದಾರೆ.

ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿ ಅಗಲೀಕರಣ, ಡಾಮರೀಕರಣಗೊಂಡಿದೆ. ಇಚಿಲಂಪಾಡಿಯಿಂದ ಪೆರಿಯಶಾಂತಿ ನಡುವಿನ ೧ ಕಿ.ಮೀ. ರಸ್ತೆ ಅರಣ್ಯ ವ್ಯಾಪ್ತಿಯಲ್ಲಿ ಬರುತ್ತಿದ್ದು ಇಲ್ಲಿ ರಸ್ತೆ ಅಗಲೀಕರಣಕ್ಕೆ ಅರಣ್ಯ ಇಲಾಖೆಯವರು ಅಡ್ಡಿಪಡಿಸುತ್ತಿದ್ದಾರೆ. ಇಲ್ಲಿ ರಸ್ತೆ ಅಗಲೀಕರಣಗೊಳ್ಳದೇ ಇರುವುದರಿಂದ ರಸ್ತೆ ಕಿರಿದಾಗಿದೆ. ಧರ್ಮಸ್ಥಳ, ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸದ್ರಿ ರಸ್ತೆಯಲ್ಲಿ ದಿನಂಪ್ರತಿ ನೂರಾರು ವಾಹನಗಳು ಓಡಾಡುತ್ತಿವೆ. ರಸ್ತೆ ಕಿರಿದಾಗಿರುವುದರಿಂದ ಇಲ್ಲಿ ಪದೇ ಪದೇ ಅಪಘಾತಗಳು ನಡೆಯುತ್ತಿದೆ. ಇದರಿಂದ ಭಕ್ತಾದಿಗಳಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ವ್ಯಾಪ್ತಿಯಲ್ಲಿ ಬರುವ ರಸ್ತೆಯ ಅಗಲೀಕರಣಕ್ಕೆ ಕ್ರಮ ಕೈಗೊಳ್ಳಬೇಕು. ಅಲ್ಲದೇ ಧರ್ಮಸ್ಥಳ – ಸುಬ್ರಹ್ಮಣ್ಯ, ಮಂಗಳೂರು – ಬೆಂಗಳೂರು ರಸ್ತೆಗಳು ಸಂಪರ್ಕಿಸುವ ಪೆರಿಯಶಾಂತಿ ಜಂಕ್ಷನ್‌ನಲ್ಲಿ ಧರ್ಮಸ್ಥಳ-ಸುಬ್ರಹ್ಮಣ್ಯ ರಸ್ತೆಗೆ ಮೇಲ್ಸೇತುವೆ ನಿರ್ಮಾಣಗೊಳಿಸಬೇಕು. ಇದರಿಂದ ಅಪಘಾತಗಳಿಗೆ ಕಡಿವಾಣ ಹಾಕಬಹುದು ಹಾಗೂ ಭಕ್ತಾದಿಗಳಿಗೂ ಅನುಕೂಲವಾಗಲಿದೆ. ಈ ಎರಡು ಬೇಡಿಕೆಗಳನ್ನು ಪರಿಗಣಿಸಿ ತುರ್ತು ಕ್ರಮ ಕೈಗೊಳ್ಳಬೇಕೆಂದು ಕೆ.ಟಿ.ವಲ್ಸಮ್ಮರವರು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರಿಗೂ ಮನವಿ ಪ್ರತಿ ಸಲ್ಲಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.