Breaking News

ಹೊಸಗದ್ದೆ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ, ಸಮುದಾಯದತ್ತ ಶಾಲೆ

Puttur_Advt_NewsUnder_1
Puttur_Advt_NewsUnder_1

hosagaddeಉಪ್ಪಿನಂಗಡಿ: ಬಜತ್ತೂರು ಗ್ರಾಮದ ಹೊಸಗದ್ದೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ದ್ವಿತೀಯ ಹಂತದ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು.

ಶಾಲೆಯ ಹಳೆಯ ಕಟ್ಟಡದ ಎರಡು ಕೋಣೆಗಳ ಮೇಲ್ಚಾವಣಿ ಕುಸಿಯುವ ಹಂತದಲ್ಲಿದ್ದು, ಇದರ ದುರಸ್ತಿ ಅನುದಾನಕ್ಕಾಗಿ ಈಗಾಗಲೇ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಆದರೆ ಈವರೆಗೆ ಅನುದಾನ ಬಿಡುಗಡೆಯಾಗದ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಬಳಿಕ ಶಾಲಾ ಎಸ್‌ಡಿಎಂಸಿ, ಮಕ್ಕಳ ಸುರಕ್ಷಾ ಸಮಿತಿ ಹಾಗೂ ಮಕ್ಕಳ ಪೋಷಕರ ವತಿಯಿಂದ ಶಾಲಾ ದುರಸ್ತಿಗೆ ಶೀಘ್ರ ಅನುದಾನ ಬಿಡುಗಡೆಗೊಳಿಸಲು ಬಜತ್ತೂರು ಪಂಚಾಯತ್ ಅಧ್ಯಕ್ಷರ ಮೂಲಕ ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ಹಾಗೂ ಕಾರ್ಯನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ವೇದಿಕೆಯಲ್ಲಿ ಬಜತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಪಂರ್ದಾಜೆ, ಸದಸ್ಯರಾದ ಗಣೇಶ್ ಕಿಂಡೋವು, ಮಾರ್ಗದರ್ಶಿ ಶಿಕ್ಷಕ ಗಿರಿಯಪ್ಪ ಗೌಡ, ಎಸ್‌ಡಿಎಂಸಿ ಅಧ್ಯಕ್ಷ ಕೆ. ರಾಮಕೃಷ್ಣ ಭಟ್, ಉಪಾಧ್ಯಕ್ಷೆ ಗಿರಿಜಾ, ಬಜತ್ತೂರು ಕ್ಲಸ್ಟರ್ ಸಿಆರ್‌ಪಿ ಗಣೇಶ್ ಗೌಡ, ಶಾಲಾ ಮುಖ್ಯಗುರು ಚಂದ್ರಲೇಖ ಉಪಸ್ಥಿತರಿದ್ದರು. ಸಹಶಿಕ್ಷಕಿ ಮಾಲತಿ ಸ್ವಾಗತಿಸಿ, ವಂದಿಸಿದರು. ಮೇಬಲ್ ಗ್ರೇಸಿ ಲಸ್ರಾದೋ, ಅಭಿಲಾಷ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.