ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ತಾಲೂಕು ಮಟ್ಟದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆ ಮಿನಿವಿಧಾನ ಸೌಧದ ತಹಶೀಲ್ದಾರರ ನ್ಯಾಯಾಲಯ ಕೊಠಡಿಯಲ್ಲಿ ಅ.19ರಂದು ನಡೆಯಿತು. ಸಭಾಧ್ಯಕ್ಷತೆ ವಹಿಸಿದ ತಹಶೀಲ್ದಾರ್ ಬಿ.ಅನಂತಶಂಕರ್ ರಾಜ್ಯೋತ್ಸವ ಆಚರಣೆಯ ರೂಪುರೇಷೆಗಳಿನ್ನಿತ್ತು ಎಲ್ಲರ ಸಹಕಾರ ಕೋರಿದರು. ನ.1ರಂದು ಪುತ್ತೂರು ಪುರಭವನದಲ್ಲಿ ನಡೆಯುವ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಭಿಮಾನಿಗಳು ಪಾಲ್ಗೊಳ್ಳುವಂತೆ ವಿನಂತಿಸಿದರು. ಕಿಲ್ಲೆ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ, ಕನ್ನಡ ಧ್ವಜಾರೋಹಣದೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಸಭೆಯಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ, ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ ಬಿ.ಪುರಂದರ ಭಟ್, ವಿಶ್ರಾಂತ ಉಪನ್ಯಾಸಕ ಪ್ರೊ|ಜೆ.ಸುವರ್ಣ, ಗಿರಿಜನ ಕಲ್ಯಾಣ ವಿಸ್ತರಣಾಧಿಕಾರಿ ಶ್ರೀಮತಿ ಅನ್ನಪೂರ್ಣೇಶ್ವರಿ, ಬೊಳುವಾರು ಸಾಂಸ್ಕೃತಿಕ ಕಲಾ ಕೇಂದ್ರದ ಅಧ್ಯಕ್ಷ ಚಿದಾನಂದ ಕಾಮತ್ ಕಾಸರಗೋಡು, ಸೇವಾದಳ ಅಧ್ಯಕ್ಷ ಜೋಕಿಂ ಡಿ’ಸೋಜ, ವಾಣಿಜ್ಯ ತೆರಿಗೆ ಇಲಾಖೆಯ ಎಸ್.ಕೆ. ರಘುನಾಥರಾವ್, ಜಿಲ್ಲಾ ಪಂಚಾಯತ್ ಸಹಾಯಕ ಇಂಜಿನಿಯರ್ ಜನಾರ್ದನ್, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಶ್ವೇತಾಕಿರಣ್, ಮೆಸ್ಕಾಂ ಸಹಾಯಕ ಇಂಜಿನಿಯರ್ ಸುರೇಶ್.ಕೆ., ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ದಮಯಂತಿ ಎ., ಉಮಾವತಿ, ಆರತಿ ಹಾಗೂ ಸೀತಾರಾಮ ಶೆಟ್ಟಿ ಬನ್ನೂರು ವಿವಿಧ ಮಾಹಿತಿಗಳನ್ನು ನೀಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.