ಅ.23: ಡೊನ್ ಬೊಸ್ಕೊ ಕ್ಲಬ್‌ನಿಂದ ಪುತ್ತೂರು, ಮರೀಲ್,  ಬನ್ನೂರು ಚರ್ಚ್ ವ್ಯಾಪ್ತಿಯ ಶಿಕ್ಷಕ-ಶಿಕ್ಷಕಿಯರಿಗೆ ಗೌರವಾರ್ಪಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮಾದೆ ದೇವುಸ್ ಚರ್ಚ್‌ನ ಡೊನ್ ಬೊಸ್ಕೊ ಕ್ಲಬ್‌ನ ವತಿಯಿಂದ ಕ್ಲಬ್‌ನ ಸುವರ್ಣ ವರ್ಷದ ಪ್ರಯುಕ್ತ ಹಮ್ಮಿಕೊಳ್ಳಲಿರುವ ಏಳನೇ ಕಾರ್ಯಕ್ರಮವಾದ ಪುತ್ತೂರು, ಮರೀಲ್ ಮತ್ತು ಬನ್ನೂರು ಚರ್ಚ್ ವ್ಯಾಪ್ತಿಯ ಕ್ರೈಸ್ತ ಸಮುದಾಯದ ಶಿಕ್ಷಕ-ಶಿಕ್ಷಕಿಯರಿಗೆ ಗೌರವಿಸುವ ಕಾರ್ಯಕ್ರಮ ಅ.23 ರಂದು ಬೆಳಿಗ್ಗೆ ಮಾದೆ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆಯಲಿದೆ. ಮಾದೆ ದೇವುಸ್ ಚರ್ಚ್‌ನ ಪ್ರಧಾನ ಧರ್ಮಗುರು ವಂ|ಆಲ್ಫ್ರೆಡ್ ಜಾನ್ ಪಿಂಟೋರವರು ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಯಾಗಿ ಮಂಗಳೂರು ಪದವಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಫ್ರಾನ್ಸಿಸ್ ಡಿೞಕುನ್ಹಾ, ಗೌರವ ಉಪಸ್ಥಿತಿಯಾಗಿ ಕೊಡಗು ಜಿಲ್ಲಾಧಿಕಾರಿ ಡಾ|ರಿಚರ್ಡ್ ವಿನ್ಸೆಂಟ್ ಡಿೞಸೋಜರವರು ಭಾಗವಹಿಸಲಿದ್ದಾರೆ ಎಂದು ಕ್ಲಬ್‌ನ ಸುವರ್ಣ ವರ್ಷದ ಆಚರಣಾ ಸಮಿತಿಯ ಗೌರವಾಧ್ಯಕ್ಷ ಮೈಕಲ್ ಡಿೞಸೋಜ, ಸಂಯೋಜಕ ಜೋನ್ ಕುಟಿನ್ಹಾ, ಅಧ್ಯಕ್ಷ ಜೋನ್ ಮಸ್ಕರೇನ್ಹಸ್, ಕಾರ್ಯದರ್ಶಿ ಕ್ಲೋಡಿಯಸ್ ಡಿೞಸೋಜರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.