ಈಜು: ಫಿಲೋಮಿನಾ ಪ್ರೌಢಶಾಲೆಯ ನೆವಿಲ್, ನೀಲ್‌ರವರು ರಾಷ್ಟ್ರಮಟ್ಟಕ್ಕೆ ಆಯ್ಕೆ 

iju

ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ದರ್ಬೆ ಸಂತ ಫಿಲೋಮಿನಾ ಪ್ರೌಢಶಾಲೆಗೆ 4 ಚಿನ್ನದ ಪದಕ, 4 ಬೆಳ್ಳಿ ಪದಕ ಮತ್ತು 1 ಕಂಚಿನ ಪದಕ ಲಭಿಸಿದ್ದು ಈರ್ವರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಾದ ನೆವಿಲ್ ಮಸ್ಕರೇನ್ಹಸ್‌ರವರು 50ಮೀ, 100ಮೀ, 200ಮೀ, ಬ್ಯಾಕ್ ಸ್ಟ್ರೋಕ್‌ನಲ್ಲಿ ಚಿನ್ನದ ಪದಕ, 4100ಫ್ರೀ ಸ್ಟೈಲ್‌ನಲ್ಲಿ ಬೆಳ್ಳಿ, 4100 ಮಿಡ್ಲೆ ರಿಲೆಯಲ್ಲಿ ಕಂಚಿನ ಪದಕಗಳನ್ನು ಪಡೆದು ರಾಜ್ಯಮಟ್ಟದ ವೈಯಕ್ತಿಕ ಚಾಂಪಿಯನ್ ಆಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನೀಲ್ ಮಸ್ಕರೇನ್ಹಸ್‌ರವರು 50ಮೀ, ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಚಿನ್ನ, 100ಮೀ, ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಬೆಳ್ಳಿ, 4100 ಮಿಡ್ಲೆ ರಿಲೇಯಲ್ಲಿ ಬೆಳ್ಳಿಯ ಪದಕವನ್ನು ಪಡೆದು ರಾಷ್ಟ್ರಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈರ್ವರಿಗೂ ಪರ್ಲಡ್ಕ ಬಾಲವನದ ಪಾರ್ಥ ವಾರಣಾಸಿ, ವಸಂತ್ ಕುಮಾರ್ ಹಾಗೂ ನಿರೂಪ್ ಜಿ.ಆರ್‌ರವರು ತರಬೇತಿಯನ್ನು ನೀಡಿರುತ್ತಾರೆ. ಇವರೀರ್ವರು ಸಾಮೆತ್ತಡ್ಕ ನಿವಾಸಿ, ಸಂತ ಫಿಲೋಮಿನಾ ಕಾಲೇಜ್‌ನಲ್ಲಿ ಪ್ರಾಧ್ಯಾಪಕರಾದ ಡಾ|ನೋರ್ಬರ್ಟ್ ಮಸ್ಕರೇನ್ಹಸ್ ಹಾಗೂ ಉಪನ್ಯಾಸಕಿ ಪ್ರಮೀಳಾ ಕ್ರಾಸ್ತಾರವರ ಪುತ್ರರಾಗಿದ್ದಾರೆ ಎಂದು ಶಾಲೆಯ ಮುಖ್ಯ ಗುರುಗಳಾದ ಓಸ್ವಾಲ್ಡ್ ರೊಡ್ರಿಗಸ್‌ರವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.