ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕರ ತರಬೇತಿ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1

vcet-cv-fdp_2

ಪುತ್ತೂರು: ದಿನದಿಂದ ದಿನಕ್ಕೆ ಬದಲಾಗುತ್ತಿರುವ ತಂತ್ರಜ್ಞಾನಗಳನ್ನು ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿ ತಿಳಿಸುವುದಕ್ಕೆ ಉಪನ್ಯಾಸಕರು ತಮ್ಮನ್ನು ತಾವು ಉನ್ನತೀಕರಿಸಿಕೊಳ್ಳುವುದು ಅವಶ್ಯ ಎಂದು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇ ಗೌಡ ಹೇಳಿದರು.
ಅವರು ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ ನಡೆದ ಮೂರು ದಿನಗಳ ಉಪನ್ಯಾಸಕರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಉಪನ್ಯಾಸಕರು ಅಧ್ಯಾಪನದ ಜತೆಗೆ ಹೊಸ ಹೊಸ ತಂತ್ರಜ್ಞಾನಗಳ ಆವಿಷ್ಕಾರದತ್ತಲೂ ಮನ ಮಾಡಬೇಕೆಂದು ಅವರು ಕರೆ ನೀಡಿದರು.
ಸಿವಿಲ್ ಎಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ.ಸಂದೀಪ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕ ಪ್ರೊ.ಶಿಶಿರಕೃಷ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ.ರೋಷನ್ ಮಾರ್ಟಿಸ್ ಮತ್ತು ಪ್ರೊ.ಅಜಿತ್ ಹೆಬ್ಬಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಪ್ರೊ.ರತನ್ ಸ್ವಾಗತಿಸಿ ವಂದಿಸಿದರು. ಪ್ರೊ. ದಿವ್ಯಸ್ವರೂಪ್ ಕಾರ್ಯಕ್ರಮ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.