ಬೆಳ್ತಂಗಡಿ : ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ಉಚಿತ ವೈದ್ಯಕೀಯ ಶಿಬಿರ

Puttur_Advt_NewsUnder_1
Puttur_Advt_NewsUnder_1

1

2

ಪುತ್ತೂರು : ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಪುತ್ತೂರು ಇದರ ಸಹಸಂಸ್ಥೆಯಾದ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ವತಿಯಿಂದ ರೋಟರಿ ಕ್ಲಬ್ ಬೆಳ್ತಂಗಡಿ, ನವೋದಯ ಯುವಕ ಮತ್ತು ಯುವತಿ ಮಂಡಲ ಮೇಂತಬೆಟ್ಟು, ಆತ್ಮೀಯ ಯುವಕ ಮಂಡಲ ಮೇಲಂತಬೆಟ್ಟು ಹಾಗೂ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ ಹೋಲಿ ರೆಡೀಮರ್ ಶಾಲಾ ವಠಾರದಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರ ನಡೆಯಿತು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪ್ರಭಾಕರ ಬಂಗೇರ ದೀಪ ಪ್ರಜ್ವಲನೆ ಮಾಡಿ ಶಿಬಿರವನ್ನು ಉದ್ಘಾಟಿಸಿ ಆರೋಗ್ಯವು ಮನುಷ್ಯನಿಗೆ ಅತ್ಯಂತ ಪ್ರಮುಖ. ಈ ನಿಟ್ಟಿನಲ್ಲಿ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯಕ್ರಮಗಳು ಶ್ಲಾಘನೀಯ, ಪ್ರತಿಯೊಬ್ಬರೂ ಇಂತಹ ವೈದ್ಯಕೀಯ ಶಿಬಿರಗಳಿಗೆ ಬಂದು ಪ್ರಯೋಜನ ಪಡೆದುಕೊಂಡು ಆರೋಗ್ಯಯುತ ಜೀವನ ನಡೆಸುವುದರೊಂದಿಗೆ ಆರೋಗ್ಯಯುತ ಸಮಾಜವನ್ನು ನಿರ್ಮಿಸುವಲ್ಲಿ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಅಧ್ಯಕ್ಷತೆ ವಹಿಸಿದ್ದ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಟ್ರಸ್ಟಿ ಸುನಿಲ್ ಬೋರ್ಕರ್ ಮಾತನಾಡಿ ಟ್ರಸ್ಟ್‌ನ ವತಿಯಿಂದ ಹಲವಾರು ಸಮಾಜಮುಖೀ ಕಾರ್ಯಕ್ರಮಗಳನ್ನು ನಡೆಸಿಕೊಂಡುಬರುತ್ತಿದ್ದು ಸ್ಥಳೀಯ ಸಂಘ-ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಯಶಸ್ವಿಯಾಗಿ ಆಯೋಜಿಸಲು ಸಾಧ್ಯವಾಗಿದೆ. ಆರೋಗ್ಯಯುತ ಸಮಾಜ ನಿರ್ಮಾಣದ ಕಲ್ಪನೆಯೊಂದಿಗೆ ಹಮ್ಮಿಕೊಳ್ಳುತ್ತಿರುವ ಇಂತಹ ಆರೋಗ್ಯ ಶಿಬಿರಗಳ ಸಂಪೂರ್ಣ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು. ಅಂತೆಯೇ ಟ್ರಸ್ಟ್‌ನ ಮೂಲಕ ಹಲವಾರು ಸಮಾಜಮುಖೀ ಕಾರ್ಯಕ್ರಮಗಳನ್ನು ಆಯೋಜಿಸುವ ಗುರಿಹೊಂದಿದ್ದು ಮುಂದಿನ ದಿನಗಳಲ್ಲಿಯೂ ನಿಮ್ಮೆಲ್ಲರ ಸಹಕಾರವನ್ನು ನಿರೀಕ್ಷಿಸುತ್ತೇವೆ ಎಂದರು.
ಮುಖ್ಯ ಅತಿಥಿಗಳಾಗಿದ್ದ ಹೋಲಿ ರೆಡೀಮರ್ ಶಾಲೆಯ ಪ್ರಾಂಶುಪಾಲ ಫಾ| ಅನಿಲ್ ಪ್ರಕಾಶ್ ಡಿಸಿಲ್ವರವರು ಮಾತನಾಡುತ್ತಾ ಆರೋಗ್ಯವೇ ಭಾಗ್ಯ, ಆರೋಗ್ಯವನ್ನು ಸುಸ್ಥಿರವಾಗಿಡುವುದು ನಮ್ಮೆಲ್ಲರಿಗೂ ಕ್ಷೇಮ, ರೋಗಗಳು ಬಂದನಂತರ ಪರಿತಪಿಸುವುದಕ್ಕಿಂತ ಮೊದಲೇ ನಾವು ಉತ್ತಮ ಆರೋಗ್ಯಯುತ ಜೀವನಶೈಲಿಯನ್ನು ನಡೆಸುವಂತಾಗಬೇಕು ಎಂದು ಹೇಳಿ ಶಿಬಿರಕ್ಕೆ ಶುಭಹಾರೈಸಿದರು.
ವೇದಿಕೆಯಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷ ಡಿ.ಎಂ ಗೌಡ, ನವೋದಯ ಯುವಕ ಮಂಡಲದ ಗೌರವಾಧ್ಯಕ್ಷ ಮನೋಹರ್ ಪಡಿವಾಳ್, ನವೋದಯ ಯುವತಿ ಮಂಡಲದ ಅಧ್ಯಕ್ಷೆ ವಿಮಲ, ಆತ್ಮೀಯ ಯುವಕ ಮಂಡಲದ ಗೌರವಾಧ್ಯಕ್ಷ ಸಚಿನ್ ಕುಮಾರ್ ನೂಜೋಡಿ, ಕೆ.ಎಂ.ಸಿ ಆಸ್ಪತ್ರೆ ಅತ್ತಾವರದ ಸಾರ್ವಜನಿಕ ಸಂಪರ್ಕಾಧಿಕಾರಿ ಹರ್ಬರ್ಟ್ ಮಾರಿಯೋ ಉಪಸ್ಥಿತರಿದ್ದರು.
ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಬೆಳ್ತಂಗಡಿ ಶಾಖಾ ವ್ಯವಸ್ಥಾಪಕ ಸೀತಾರಾಮ ಪೂಜಾರಿ ಸ್ವಾಗತಿಸಿ, ಹೋಲಿ ರೆಡೀಮರ್ ಶಾಲೆಯ ಕುಮಾರಿ ಮಧುಶ್ರೀ ಮತ್ತು ಬಳಗ ಪ್ರಾರ್ಥಿಸಿದರು, ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‌ನ ಸಿಬ್ಬಂದಿ ಬಿಪಿನ್ ಚಂದ್ರ ಕಾರ್ಯಕ್ರಮ ಸಂಯೋಜಿಸಿ ನಿರೂಪಿಸಿದರು.
ಶಿಬಿರದಲ್ಲಿ ಸಾಮಾನ್ಯ ರೋಗ, ಕಣ್ಣು, ಕಿವಿ, ಮೂಗು, ಗಂಟಲು, ಮಕ್ಕಳ ವಿಭಾಗ, ಸ್ತ್ರೀ ರೋಗ, ಎಲುಬು ತಪಾಸಣೆ ನಡೆಯಿತು. ಮಧುಮೇಹ, ರಕ್ತದೊತ್ತಡ ಪರೀಕ್ಷೆ ನಡೆಸಲಾಯಿತು. ೨೦೦ಕ್ಕೂ ಅಧಿಕ ಜನರು ಶಿಬಿರದಲ್ಲಿ ತಪಾಸಣೆಯನ್ನು ಮಾಡಿಕೊಂಡರು, ಔಷಧ ವಿತರಣೆಯೊಂದಿಗೆ ೧೦೦ ಮಂದಿಗೆ ಕನ್ನಡಕ ವಿತರಿಸಲಾಯಿತು. ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವವರಿಗೆ ಗ್ರೀನ್‌ಕಾರ್ಡ್ ನೀಡಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.