ನ. 5: ಫಿಲೋಮಿನಾದಲ್ಲಿ ಖಗೋಳ ವಿಜ್ಞಾನದ ಕುರಿತು ಕಾರ್ಯಾಗಾರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇಲ್ಲಿಯ ಸಂತ ಫಿಲೋಮಿನಾ ಕಾಲೇಜಿನ ಸ್ನಾತ್ತಕೋತ್ತರ ಭೌತಶಾಸ್ತ್ರ ವಿಭಾಗದ ಆಶ್ರಯದಲ್ಲಿ  ಖಗೋಳ ವಿಜ್ಞಾನದ ಕುರಿತು ಒಂದು ದಿನದ ಕಾರ್ಯಾಗಾರ ನ.5ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಬೆಂಗಳೂರಿನ ಕ್ರೈಸ್ಟ್ ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ಪ್ರಾಧ್ಯಾಪಕ ಡಾ. ಪೌಲ್ ಕೆ ಟಿ ಕಾರ್ಯಾಗಾರ ಉದ್ಘಾಟಿಸಿ, ನಕ್ಷತ್ರಗಳ ರೋಹಿತದ ಕುರಿತು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೊ ನೊರೊನ್ಹ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ ಡಾ ಎ.ಪಿ ರಾಧಾಕೃಷ್ಣ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾಲೇಜಿನ ಸಂಚಾಲಕ ಅತಿ ವಂ. ಆಲ್ಫ್ರೆಡ್ ಜೆ ಪಿಂಟೊ ಅಧ್ಯಕ್ಷತೆ ವಹಿಸಲಿದ್ದಾರೆ. ನಂತರ ವಿವಿಧ ಗೋಷ್ಠಿಗಳನ್ನು ಆಯೋಜಿಸಲಾಗಿದ್ದು, ಮಣಿಪಾಲ ವಿಶ್ವವಿದ್ಯಾನಿಲಯದ ಸಂಶೋಧಕ ಕೃಷ್ಣ ಮೋಹನ್‌ರವರು ಫರ್ಮಿ ದೂರದರ್ಶಕದ ಕುರಿತು ಪ್ರಬಂಧ ಮಂಡಿಸಲಿದ್ದಾರೆ. ಕ್ರೈಸ್ಟ್ ವಿಶ್ವವಿದ್ಯಾನಿಲಯದ ಸಂಶೋಧಕಿ ಶ್ರುತಿ ಎಸ್ ಭಟ್ ಐರಾಫ್ ಎಂಬ ಸಾಫ್ಟ್‌ವೇರ್‌ನ ಉಪಯೋಗದ ಕುರಿತು ಪ್ರಾತ್ಯಕ್ಷಿಕೆಯನ್ನು ನೀಡಲಿದ್ದಾರೆ. ಈ ಕಾರ್ಯಾಗಾರದಲ್ಲಿ ಭಾಗವಹಿಸಲು ಆಸಕ್ತಿಯಿರುವವರು ಹೆಚ್ಚಿನ ಮಹಿತಿಗಾಗಿ ಸಂಯೋಜಕರಾಗಿರುವ ಡಾ. ದೀಪಕ್ ಡಿಸಿಲ್ವ (ಮೊ: ೮೯೭೦೦೯೩೨೬೩)ರವರನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

 

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.