ಉದನೆ: ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ-ಪ್ರೌಢಶಾಲಾ ವಿಭಾಗದ ಕ್ರೀಡಾಕೂಟ; ಪಠ್ಯ ಚಟುವಟಿಕೆಗೆ ಸೀಮಿತಗೊಳ್ಳದೇ ಕ್ರೀಡೆಗೂ ಒತ್ತು ಕೊಡಿ: ಪಿ.ಪಿ.ವರ್ಗೀಸ್

Puttur_Advt_NewsUnder_1
Puttur_Advt_NewsUnder_1

udane udane1

ನೆಲ್ಯಾಡಿ: 2016-17ನೇ ಸಾಲಿನ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ, ಬಾಲಕಿಯರ ಕ್ರೀಡಾಕೂಟ ಅ.28ರಂದು ಉದನೆ ಸಂತ ಅಂತೋನಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.

ಬೆಳಿಗ್ಗೆ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಕಡಬ ಕ್ಷೇತ್ರದ ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್‌ರವರು, ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ, ವಿದ್ಯಾರ್ಥಿಗಳೆಲ್ಲರೂ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಸಾಧನೆ ತೋರಿಸಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಯು ತಾಲೂಕು. ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲೂ ಬೆಳಗಲಿ. ವಿದ್ಯಾರ್ಥಿಗಳು ಕೇವಲ ಪಠ್ಯ ಚಟುವಟಿಕೆಗಳಿಗೆ ತಮ್ಮ ಪ್ರತಿಭೆಯನ್ನು ಸೀಮಿತಗೊಳಿಸದೇ ಶಾರೀರಿಕವಾಗಿ ಶಕ್ತಿ ತುಂಬುವಂತಹ ಕ್ರೀಡೆಗೂ ಒತ್ತು ಕೊಡಬೇಕು. ಸೋಲನ್ನೂ ಸಮಾನವಾಗಿ ಸ್ವೀಕರಿಸಿ ಒಂದೇ ಕುಟುಂಬದವರೆಂದು ಭಾವಿಸಿ ಸಹೋದರತೆ ಮೆರೆಯಬೇಕು ಎಂದು ಹೇಳಿದರು.

ಉದನೆ ಸಂತ ತೋಮಸರ ದೇವಾಲಯದಿಂದ ತಂದ ಕ್ರೀಡಾಜ್ಯೋತಿ ಬೆಳಗಿಸಿ ಮಾತನಾಡಿದ ತಾ.ಪಂ.ಸದಸ್ಯೆ ಆಶಾ ಲಕ್ಷ್ಮಣ್‌ರವರು, ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಮುಂದೆ ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ಸಿಗುತ್ತವೆ. ಕ್ರೀಡೆಯಿಂದ ದೈಹಿಕವಾಗಿಯೂ ವ್ಯಾಯಾಮ ದೊರೆಯುತ್ತದೆ. ಪಠ್ಯದೊಂದಿಗೆ ಕ್ರೀಡೆಯಲ್ಲಿಯೂ ಇಲ್ಲಿನ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಮಿಂಚಬೇಕೆಂದು ಹೇಳಿದರು. ಕ್ರೀಡಾ ಧ್ವಜಾರೋಹಣ ನೆರವೇರಿಸಿದ ಶಿರಾಡಿ ಗ್ರಾ.ಪಂ.ಅಧ್ಯಕ್ಷ ತಿಮ್ಮಯ್ಯ ಗೌಡ, ತಾಲೂಕು ಸಹಾಯಕ ಕ್ರೀಡಾಧಿಕಾರಿ ಎಂ. ಮಾಮಚ್ಚನ್‌ರವರು ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಉದನೆ ಸಂತ ಅಂತೋನಿ ವಿದ್ಯಾಸಂಸ್ಥೆ ಸಂಚಾಲಕ ರೆ|ಫಾ| ಹನಿ ಜೇಕಬ್‌ರವರು ಮಾತನಾಡಿ, ಸಂಸ್ಥೆಯಲ್ಲಿ ನಡೆಯುತ್ತಿರುವ ವಲಯ ಮಟ್ಟದ ಕ್ರೀಡಾಕೂಟಕ್ಕೆ ಹಲವು ಮಂದಿ ಸಹಕರಿಸಿದ್ದಾರೆ. ಅವರೆಲ್ಲರಿಗೂ ದೇವರ ಅನುಗ್ರಹವಿರಲಿ. ವಿದ್ಯಾರ್ಥಿಗಳ ಪ್ರತಿಭೆ ರಾಷ್ಟ್ರ ಮಟ್ಟದಲ್ಲಿ ಪ್ರಜ್ವಲಿಸಿ ಊರಿಗೆ ಕೀರ್ತಿ ತರುವಂತಾಗಲಿ ಎಂದು ಶುಭ ಹಾರೈಸಿದರು. ಉಪ್ಪಿನಂಗಡಿ ವಲಯ ಸಂಯೋಜಕಿ ತನುಜ, ನೆಲ್ಯಾಡಿ ಸಮೂಹ ಸಂಪನ್ಮೂಲ ವ್ಯಕ್ತಿ ಅಶೋಕ್ ಕುಮಾರ್, ಉದನೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ದಿವಾಕರ ಗೌಡ, ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮಹೇಂದ್ರನ್ ಪಿಳ್ಳೈ, ನೂಜಿಬಾಳ್ತಿಲ ಬೆಥನಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ತೋಮಸ್ ಎಂ.ಕೆ, ನೆಲ್ಯಾಡಿ ಸೈಂಟ್ ಜಾರ್ಜ್ ಪ.ಪೂ.ಕಾಲೇಜಿನ ಮುಖ್ಯೋಪಾಧ್ಯಾಯ ರವೀಂದ್ರ ಟಿ., ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉದನೆ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಸೆಬಾಸ್ಟಿಯನ್ ಕೆ.ಎಸ್ ಸ್ವಾಗತಿಸಿ, ಶಿಕ್ಷಕ ಬಾಲಕೃಷ್ಣ ವಂದಿಸಿದರು. ಶಿಕ್ಷಕರಾದ ಶ್ರೀಧರ ಬಳಕ, ಯಶೋಧರ ಕಾರ‍್ಯಕ್ರಮ ನಿರೂಪಿಸಿದರು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಜಿಮ್ಸನ್ ವರ್ಗೀಸ್ ಕ್ರೀಡಾಕೂಟ ನಿರ್ವಹಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಕವಾಯಿತು ಪ್ರದರ್ಶನ ನಡೆಯಿತು. ಶಾಲಾ ವಿದ್ಯಾರ್ಥಿ ನಾಯಕ ರಂಜನ್ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.