ನ.1: ಕಾವು ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದಿಂದ ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನವೋದಯ ಗ್ರಾಮ ವಿಕಾಸ ಟ್ರಸ್ಟ್ ಮಂಗಳೂರು ಪ್ರವರ್ತಿತ ನವೋದಯ ಸ್ವ-ಸಹಾಯ ಸಂಘಗಳ ಒಕ್ಕೂಟ ಕಾವು ಇದರ ವತಿಯಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರದೊಂದಿಗೆ ವಿದ್ಯಾರ್ಥಿ ವೇತನ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ ನ.1ರಂದು ಬೆಳಿಗ್ಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶಿವಸದನ ಸಭಾಭವನದಲ್ಲಿ ನಡೆಯಲಿದೆ. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಾವು ನವೋದಯ ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಚಿದಾನಂದ ಆಚಾರ್ಯರವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಅರಿಯಡ್ಕ ಗ್ರಾ.ಪಂ ಅಧ್ಯಕ್ಷೆ ಸವಿತಾ ಎಸ್, ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜ್‌ನ ಪ್ರಾಂಶುಪಾಲ ಕೆ.ಆರ್ ಗೋಪಾಲಕೃಷ್ಣ, ಕಾವು ನನ್ಯ ತುಡರ್ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುಬ್ರಾಯ ಬಲ್ಯಾಯ, ಪುತ್ತೂರು ನವೋದಯ ಟ್ರಸ್ಟ್‌ನ ಮೇಲ್ವಿಚಾರಕ ಗಿರೀಶ್ ಗೋಲ್‌ವಲ್ಕರ್ ಮುಖ್ಯಅಭ್ಯಾಗತರಾಗಿ ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.