ನ.4, 5: ರಾಮಕುಂಜದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಬಾಲಕ, ಬಾಲಕಿಯರ ಕ್ರೀಡಾಕೂಟ

Puttur_Advt_NewsUnder_1
Puttur_Advt_NewsUnder_1

ರಾಮಕುಂಜ: 2016ನೇ ಸಾಲಿನ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ, ಬಾಲಕಿಯರ ಕ್ರೀಡಾಕೂಟ ನ.4 ಮತ್ತು 5ರಂದು ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲಾ ಕಾರ‍್ಯದರ್ಶಿ ಕೆ.ಸೇಸಪ್ಪ ರೈ ರಾಮಕುಂಜ ತಿಳಿಸಿದ್ದಾರೆ.

ನ.4ರಂದು ಬೆಳಿಗ್ಗೆ ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡುರವರು ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಸುಳ್ಯ ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದೀಯ ಕಾರ್ಯದರ್ಶಿಯೂ ಆಗಿರುವ ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ತಾ.ಪಂ.ಅಧ್ಯಕ್ಷೆ ಭವಾನಿ ಚಿದಾನಂದ, ಜಿ.ಪಂ.ಸದಸ್ಯ ಸರ್ವೋತ್ತಮ ಗೌಡ, ತಾ.ಪಂ.ಸದಸ್ಯೆಯರಾದ ಜಯಂತಿ ಆರ್.ಗೌಡ, ತೇಜಸ್ವಿನಿ ಶೇಖರ ಗೌಡ, ರಾಮಕುಂಜ ಗ್ರಾ.ಪಂ.ಅಧ್ಯಕ್ಷ ಪ್ರಶಾಂತ್ ಆರ್.ಕೆ, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಜಿ.ಎಸ್, ಸೇರಿದಂತೆ ಇಲಾಖೆಯ ಅಧಿಕಾರಿಗಳು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಣ ಶಿಕ್ಷಕರಾದ ನಯನಾ ವಿ.ರೈ, ಮೋನಪ್ಪರವರಿಗೆ ಸನ್ಮಾನ ಕಾರ‍್ಯಕ್ರಮ ನಡೆಯಲಿದೆ.

ನ.5ರಂದು ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಜಿ.ಪಂ.ಮಾಜಿ ಸದಸ್ಯ ಬಾಲಕೃಷ್ಣ ಬಾಣಜಾಲು ಬಹುಮಾನ ವಿತರಣೆ ಮಾಡಲಿದ್ದಾರೆ. ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಅಧ್ಯಕ್ಷ ಕೃಷ್ಣಮೂರ್ತಿ ಇ ಕಲ್ಲೇರಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ದೈಹಿಕ ಶಿಕ್ಷಣ ಶಿಕ್ಷಕರ ಸಮಾಗಮ

ಕ್ರೀಡಾಕೂಟದ ಜೊತೆಗೆ 50 ವರ್ಷಗಳ ಅವಧಿಯಲ್ಲಿ ತಾಲೂಕಿನ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಹಾಗೂ ಹಾಲಿ ಕರ್ತವ್ಯದಲ್ಲಿ ಇರುವ ದೈಹಿಕ ಶಿಕ್ಷಣ ಶಿಕ್ಷಕರ ಸಮಾಗಮವೂ ನಡೆಯಲಿದೆ. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಎಂ.ಕೆ. ಸಾಲಿಯಾನ್, ಎಂ.ಸಂಜೀವ ರೈ, ಲೂಯಿಸ್ ಮಸ್ಕರೇನಸ್, ಕೆ.ಸೇಸಪ್ಪ ರೈ, ಗೋಪಾಲ ಶೆಟ್ಟಿ, ಹರಿಣಾಕ್ಷ, ರಘುನಾಥ ರೈ, ವೆಂಕಟ್ರಮಣ ಭಟ್, ಜೆರೋಮಿಯಸ್ ಪಾಯಸ್, ಟಿ.ಪಿ.ಅಬ್ರಹಾಂ, ಚಿದಾನಂದ ರೈ, ಜನಾರ್ದನ ನೇರಳ, ಉಮೇಶ್ ದೇವಾಡಿಗ, ಚಂದ್ರಶೇಖರ, ಗೋಪಾಲಕೃಷ್ಣ ಎಸ್., ಇಬ್ರಾಹಿಂ ಹಾಗೂ ಹಾಲಿ ಕರ್ತವ್ಯದಲ್ಲಿರುವ ೧೪೮ ದೈಹಿಕ ಶಿಕ್ಷಣ ಶಿಕ್ಷಕರ ಸಮಾಗಮವೂ ನಡೆಯಲಿದೆ ಎಂದು ಸೇಸಪ್ಪ ರೈ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.