Breaking News

ನ.1: ಕಾವುನಲ್ಲಿ 5ನೇ ವರ್ಷದ ಸಾಮೂಹಿಕ ಗೋಪೂಜೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ವಿಶ್ವ ಹಿಂದೂ ಪರಿಷತ್, ಭಜರಂಗ ದಳ ಮತ್ತು ಸಾಮೂಹಿಕ ಗೋಪೂಜಾ ಸಮಿತಿ ಕಾವು ಇದರ ನೇತೃತ್ವದಲ್ಲಿ 5ನೇ ವರ್ಷದ ಸಾಮೂಹಿಕ ಗೋಪೂಜೆ, ಮೆರವಣಿಗೆ, ತುಳಸಿ ಕಟ್ಟೆ ವಿತರಣೆ ಹಾಗೂ ಧಾರ್ಮಿಕ ಸಭೆಯು ನ.1ರಂದು ಸಂಜೆ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

ಸಂಜೆ ಗಂಟೆ 4.30ಕ್ಕೆ ಕೌಡಿಚ್ಚಾರಿನಲ್ಲಿ ಉದ್ಘಾಟನೆಗೊಂಡು ಕಾವು ಮೂಲಕ ಬಂದು ದೇವಸ್ಥಾನದಲ್ಲಿ ಸಮಾಪನಗೊಳ್ಳಲಿರುವ ಮೆರವಣಿಗೆಯನ್ನು ಪ್ರಗತಿಪರ ಹೈನುಗಾರ ಕಿರಣ್ ಪ್ರಭು ಮುಂಡಕೊಚ್ಚಿಯವರು ಉದ್ಘಾಟಿಸಲಿದ್ದಾರೆ. ಬಳಿಕ ದೇವಸ್ಥಾನದಲ್ಲಿ ಸಾಮೂಹಿಕ ಗೋಪೂಜೆ ನಡೆಯಲಿದೆ.

ಧಾರ್ಮಿಕ ಸಭೆ: ಸಾಮೂಹಿಕ ಗೋಪೂಜೆಯ ಬಳಿಕ ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕಾಸರಗೋಡು ಹಿಂದೂ ಐಕ್ಯ ವೇದಿಕೆಯ ಸಂಚಾಲಕ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರು ಧಾರ್ಮಿಕ ಭಾಷಣ ಮಾಡಲಿದ್ದು, ವಿಶ್ವ ಹಿಂದೂ ಪರಿಷತ್‌ನ ಪುತ್ತೂರು ಪ್ರಖಂಡದ ಅಧ್ಯಕ್ಷ ಜನಾರ್ಧನ ಬೆಟ್ಟರವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಉದ್ಯಮಿ, ಕೋಡಿಂಬಾಡಿ ರೈ ಎಸ್ಟೇಟ್‌ನ ಅಶೋಕ್ ಕುಮಾರ್ ರೈ, ಆದರ್ಶ ಆಸ್ಪತ್ರೆಯ ವೈದ್ಯ ಡಾ. ಎಂ.ಕೆ ಪ್ರಸಾದ್, ಪುತ್ತೂರು ಧರ್ಮ ಜಾಗೃತಿ ವೇದಿಕೆಯ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಭಜರಂಗದಳದ ಮಂಗಳೂರು ವಿಭಾಗದ ಸಂಚಾಲಕ ಮುರಲೀಕೃಷ್ಣ ಹಸಂತಡ್ಕ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿವ್ಯನಾಥ ಶೆಟ್ಟಿ ಇವರುಗಳು ಮುಖ್ಯಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮ: ಸಭಾ ಕಾರ್ಯಕ್ರಮದ ಬಳಿಕ ಜಗದೀಶ ಆಚಾರ್ಯ ಕಲಾ ಸಿಂಧು ಬಳಗ ಪುತ್ತೂರು ಇವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.