ಕೈಕಾರ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಮುಂಡಾಳಗುತ್ತು ಶ್ರೀಧರ ಪಿ.ರೈ  ನಿಧನ

Puttur_Advt_NewsUnder_1
Puttur_Advt_NewsUnder_1

 

9ಪುತ್ತೂರು: ಒಳಮೊಗ್ರು ಗ್ರಾಮದ ಕೈಕಾರ ನಿವಾಸಿಯಾಗಿದ್ದ ಮುಂಡಾಳಗುತ್ತು ಶ್ರೀಧರ ಪಿ.ರೈ(81ವ.)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಅ.29ರಂದು ರಾತ್ರಿ ಆದರ್ಶ ಆಸ್ಪತ್ರೆಯಲ್ಲಿ ನಿಧನರಾದರು. ಹಲವು ವರ್ಷಗಳ ಕಾಲ ಕೈಕಾರದಲ್ಲಿ ದಿನಸಿ ಅಂಗಡಿ ಹೊಂದಿ ವ್ಯವಹಾರ ನಡೆಸುತ್ತಿದ್ದ ಶ್ರೀಧರ ರೈಯವರು ಕೈಕಾರ ಹಾಲು ಉತ್ಪಾದಕರ ಸಹಕಾರ ಸಂಘ, ಕೈಕಾರ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ, ಸರ್ವಶಕ್ತಿ ಯುವಕ ಮಂಡಲದ ಗೌರವಾಧ್ಯಕ್ಷರಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ಸಾಮಾಜಿಕ ಸೇವಾ ಮನೋಭಾವ ಮೈಗೂಡಿಸಿಕೊಂಡಿದ್ದರು. ಮೃತರು ಪತ್ನಿ ಸುಮತಿ ಎಸ್.ರೈ, ಹೊಸೂರಿನಲ್ಲಿ ಹೊಟೇಲ್ ಉದ್ಯಮಿಯಾಗಿರುವ ಪುತ್ರ ಪ್ರದೀಪ್ ರೈ, ಪುತ್ರಿಯರಾದ ಅಮಿತಾ ಆರ್.ರೈ, ಸುನೀತಾ ಎಸ್.ರೈ, ಸೊಸೆ, ಅಳಿಯಂದಿರು,ಮೊಮ್ಮಕ್ಕಳು ಮತ್ತು ಮೂವರು ಸಹೋದರರು ಹಾಗೂ ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ.ಹಲವು ಗಣ್ಯರು ಮೃತರ ಮನೆಗೆ ಭೇಟಿ ನೀಡಿ ಸಂತಾಪ ಸಲ್ಲಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.