ದ 3, 4- ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ, ವಾರ್ಷಿಕೋತ್ಸವ

pragathi-photo_2

ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಮತ್ತು ವಾರ್ಷಿಕೋತ್ಸವವು ದ 3 ಮತ್ತು 4ರಂದು ನಡೆಯಲಿದೆ. ದ 3ರಂದು ನಡೆಯುವ ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆಯನ್ನು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಆಡಳಿತ ಸಮಿತಿಯ ಉಪಾಧ್ಯಕ್ಷರಾದ ವಿಶ್ವನಾಥ ರೈ ಮಾದೋಡಿಯವರು ವಹಿಸಲಿದ್ದು, ಕರ್ನಾಟಕ ಜನಪದ ಮತ್ತು ಯಕ್ಷಗಾನ ಅಕಾಡಮಿಯ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಭಾಸ್ಕರ ರೈ ಕುಕ್ಕುವಳ್ಳಿ, ಪುತ್ತೂರು ಬೊಳುವಾರು ಸಾಂಸ್ಕೃತಿಕ ಕಲಾ ಕೇಂದ್ರದ ಅಧ್ಯಕ್ಷ ಚಿದಾನಂದ ಕಾಮತ್ ಕಾಸರಗೋಡು, ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಗೌರವಾಧ್ಯಕ್ಷ ಉದಯಕುಮಾರ್ ಬೆಟ್ಟರವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಬಳಿಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ದ.4ರಂದು ನಡೆಯುವ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಆಡಳಿತ ಸಮಿತಿ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು, ಮಾದೋಡಿಯವರು ವಹಿಸಲಿದ್ದು, ಮಂಗಳೂರು ಸಾರ್ವಜನಿಕ ಶಿಕ್ಷಣ ಇಲಾಖೆಯ ವಾಲ್ಟರ್ ಎಚ್ ಡಿಮೆಲ್ಲೊ, ಶಾಲಾ ಆಡಳಿತ ಸಮಿತಿ ಅಧ್ಯಕ್ಷರು, ಜಿಲ್ಲಾ ಜನತಾ ಬಜಾರ್ ಇದರ ಅಧ್ಯಕ್ಷ ಉದಯ ರೈ ಮಾದೋಡಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ವಿದ್ಯಾರ್ಥಿಗಳಿಂದ ಭಾರತೀಯ ಸಂಸ್ಕೃತಿ ಬಿಂಬಿಸುವ ನೃತ್ಯಗಳು ಮತ್ತು ಯಕ್ಷಗಾನ ನಡೆಯಲಿದೆ ಎಂದು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ವಸಂತ ರೈ ಕಾರ್ಕಳ, ಮುಖ್ಯಗುರುಗಳಾದ ಗಿರಿಶಂಕರ ಸುಲಾಯ, ಸರಸ್ವತಿ ಎಂರವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.