Breaking News

ಡಿ.4: ಪುತ್ತೂರು ರೋಟರಿ ಮನಿಷಾ ಹಾಲ್‌ನಲ್ಲಿ ಬಿಜೆಪಿ ಮಹಿಳಾ ಮೋರ್ಛಾದಿಂದ ಉಚಿತ ವೈದ್ಯಕೀಯ ಶಿಬಿರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬಿಜೆಪಿ ನಗರ ಮಂಡಲದ ಮಹಿಳಾ ಮೋರ್ಛಾದ ನೇತೃತ್ವದಲ್ಲಿ ಕೆ.ಎಂ.ಸಿ ಹಾಸ್ಪಿಟಲ್ ಅತ್ತಾವರ ಮಂಗಳೂರು ಇವರ ಸಹಯೋಗದೊಂದಿಗೆ ಮಹಿಳೆ ಮತ್ತು ಮಕ್ಕಳ ಉಚಿತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವು ಡಿ.4ರಂದು ಪುತ್ತೂರು ಜೈನ ಭವನದ ಬಳಿಯ ರೋಟರಿ ಮನಿಷಾ ಹಾಲ್‌ನಲ್ಲಿ ನಡೆಯಲಿದೆ. ಬಿಜೆಪಿ ಮಹಿಳಾ ಮೋರ್ಛಾದ ಜಿಲ್ಲಾಧ್ಯಕ್ಷೆ ಪೂಜಾ ಪೈ ಯವರು ಶಿಬಿರ ಉದ್ಘಾಟಿಸಲಿದ್ದು, ನಗರ ಮಂಡಲದ ಮಹಿಳಾ ಮೋರ್ಛಾದ ಅಧ್ಯಕ್ಷೆ ವಿದ್ಯಾ ಆರ್. ಗೌರಿಯವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ತಾ.ಪಂ ಅಧ್ಯಕ್ಷೆ ಭವಾನಿ ಚಿದಾನಂದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಮಂಡಲದ ಅಧ್ಯಕ್ಷ ಜೀವಂಧರ್ ಜೈನ್‌ರವರು ಉಪಸ್ಥಿತಿ ವಹಿಸಲಿದ್ದಾರೆ. ಸಾರ್ವಜನಿಕರು ಹಾಗೂ ಕಾರ್ಯಕರ್ತ ಬಂಧುಗಳು ಶಿಬಿರ ಪ್ರಯೋಜನ ಪಡೆದುಕೊಳ್ಳುವಂತೆ ಬಿಜೆಪಿ ನಗರ ಮಂಡಲದ ಮಹಿಳಾ ಮೋರ್ಛಾದ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.