ನೆಲ್ಯಾಡಿ: ಮೆಸ್ಕಾಂ ಸಲಹಾ ಸಮಿತಿ ಸಭೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹ

Puttur_Advt_NewsUnder_1
Puttur_Advt_NewsUnder_1

 

nelyadyನೆಲ್ಯಾಡಿ: ಬಾಡಿಗೆ ಕಟ್ಟಡದಲ್ಲಿ ಕಾರ‍್ಯಾಚರಿಸುತ್ತಿರುವ ಮೆಸ್ಕಾಂ ನೆಲ್ಯಾಡಿ ಶಾಖೆಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ನೆಲ್ಯಾಡಿ ಶಾಖಾ ಸಲಹಾ ಸಮಿತಿ ಸಭೆಯಲ್ಲಿ ಆಗ್ರಹಿಸಲಾಗಿದೆ.

ಸಭೆ ನ.25ರಂದು ಮೆಸ್ಕಾಂ ನೆಲ್ಯಾಡಿ ಶಾಖಾ ಕಚೇರಿಯಲ್ಲಿ ನಡೆಯಿತು. ಮೆಸ್ಕಾಂ ನೆಲ್ಯಾಡಿ ಶಾಖಾ ಕಚೇರಿಗೆ ಸ್ವಂತ ಕಟ್ಟಡವಿಲ್ಲ, ಬಾಡಿಗೆ ಕಟ್ಟಡದಲ್ಲಿ ಕಾರ‍್ಯನಿರ್ವಹಿಸುತ್ತಿದೆ. ನೆಲ್ಯಾಡಿ ಗ್ರಾ.ಪಂ.ನಿಂದ ನೆಲ್ಯಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡದ ಪಕ್ಕದಲ್ಲಿ ಮೆಸ್ಕಾಂ ಕಚೇರಿ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡಲು ನಿರ್ಣಯ ಕೈಗೊಳ್ಳಲಾಗಿದೆ. ಆದ್ದರಿಂದ ಸದ್ರಿ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವ ಸಂಬಂಧ ಸಂಬಂಧಿಸಿದವರಿಗೆ ಮನವಿ ಮಾಡಲು ಸಭೆಯಲ್ಲಿ ನಿರ್ಣಯಿಸಲಾಯಿತು.

ನ್ಯೂಟ್ರಲ್‌ನಲ್ಲಿ ವಿದ್ಯುತ್ ಸಪ್ಲೈ ಬಂದಾಗ ಬಿಲ್ಲು ಜಾಸ್ತಿ ಬರುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು ಈ ಹಿನ್ನಲೆಯಲ್ಲಿ ಸ್ಟಾಟಿಕ್ ಮಾಪಕದ ನಿಖರತೆಯನ್ನು ಪರೀಕ್ಷಿಸುವಂತೆ ಜಿ.ಪಂ.ಸದಸ್ಯ ಸರ್ವೋತ್ತಮ ಗೌಡ ಸೂಚಿಸಿದರು. ಆಲಂಕಾರು ಬಳಿ 110 ಕೆವಿ ಸಬ್‌ಸ್ಟೇಷನ್ ಶೀಘ್ರ ಪ್ರಾರಂಭಿಸಲು ಕ್ರಮಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಲೋಡ್‌ಶೆಡ್ಡಿಂಗ್ ಚಾರ್ಟ್‌ನ್ನು ಸಲಹಾ ಸಮಿತಿಯ ಎಲ್ಲಾ ಸದಸ್ಯರುಗಳಿಗೆ ನೀಡುವಂತೆ ಸಭೆಯಲ್ಲಿ ಸೂಚಿಸಲಾಯಿತು. ಪರಕೆ ಕಾಪಿನಬಾಗಿಲು ಕಂಚಿನಡ್ಕ ರೋಡ್ ಬಳಿ ಹೆಚ್ಚುವರಿ ಪರಿವರ್ತಕ ಅಳವಡಿಸುವಂತೆ ಸದಸ್ಯ ವರ್ಗೀಸ್ ಅಬ್ರಹಾಂ ಆಗ್ರಹಿಸಿದರು. ಶಿರಾಡಿ63 ಕೆವಿ ಪರಿವರ್ತಕದ ವಾಹಕ ಬದಲಾವಣೆ, ಪಂಜಿಗುಡ್ಡೆ, ಕೊಕ್ಕಡ, ಕೊಣಾಲು, ಕೊರಡೇಲು, ನೆಲ್ಯಾಡಿ ಸರಕಾರಿ ಆಸ್ಪತ್ರೆ ಬಳಿ ಹೆಚ್ಚುವರಿ ಪರಿವರ್ತಕ ಅಳವಡಿಸುವಂತೆ ಸದಸ್ಯರು ಬೇಡಿಕೆ ಸಲ್ಲಿಸಿದರು. ಈ ಹಿಂದಿನ ಸಲಹಾ ಸಮಿತಿಯಲ್ಲಿ ಚರ್ಚಿಸಿ ಕೈಗೊಂಡ ನಿರ್ಣಯಗಳ ಪೈಕಿ ಶೇ.90ರಷ್ಟು ಕೆಲಸಗಳು ಶೀಘ್ರ ಅನುಷ್ಠಾನಗೊಂಡಿರುವುದಕ್ಕೆ ಮೆಸ್ಕಾಂ ಜೆಇ ಸಜಿಕುಮಾರ್ ಹಾಗೂ ಸಿಬ್ಬಂದಿಗಳನ್ನು ಸಲಹಾ ಸಮಿತಿ ಸದಸ್ಯರು ಅಭಿನಂದಿಸಿದರು.

ಸಭೆಯಲ್ಲಿ ಮೆಸ್ಕಾಂ ಕಡಬ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸುರೇಶ್ ಕುಮಾರ್, ನೆಲ್ಯಾಡಿ ಶಾಖಾಧಿಕಾರಿ ಸಜಿಕುಮಾರ್, ಜಿ.ಪಂ.ಸದಸ್ಯ ಸರ್ವೋತ್ತಮ ಗೌಡ, ತಾ.ಪಂ.ಸದಸ್ಯೆ ಕೆ.ಟಿ.ವಲ್ಸಮ್ಮ, ಸಲಹಾ ಸಮಿತಿ ಸದಸ್ಯ ವರ್ಗಿಸ್‌ರಾದ ಗಂಗಾಧರ ಶೆಟ್ಟಿ ಹೊಸಮನೆ, ದಿವಾಕರ ಉದನೆ, ಅಬ್ರಹಾಂ ಇಚಿಲಂಪಾಡಿ, ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜೋಯ್ ಥೋಮಸ್, ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಸದಸ್ಯ ಅಬ್ರಹಾಂ ಕೆ.ಪಿ. ಸಭೆಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.