Breaking News

ಗೋಳಿತ್ತೊಟ್ಟು ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ

Puttur_Advt_NewsUnder_1
Puttur_Advt_NewsUnder_1

78

ನೆಲ್ಯಾಡಿ: ಗೋಳಿತ್ತೊಟ್ಟು ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ ನಡೆಯಿತು. ಬಾಲವಿಕಾಸ ಸಮಿತಿ ಅಧ್ಯಕ್ಷೆ, ಗೋಳಿತ್ತೊಟ್ಟು ಗ್ರಾ.ಪಂ.ಅಧ್ಯಕ್ಷೆ ಶಾಲಿನಿ ಶೇಖರ ಪೂಜಾರಿ ಉದ್ಘಾಟಿಸಿದರು. ಅಂಗನವಾಡಿ ಪುಟಾಣಿ ವೈಶಾಖ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಪ್ರಯುಕ್ತ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ತಾ.ಪಂ.ಸದಸ್ಯೆ ತೇಜಸ್ವಿನಿ ಶೇಖರ ಗೌಡ, ಗೋಳಿತ್ತೊಟ್ಟು ಗ್ರಾ.ಪಂ.ಉಪಾಧ್ಯಕ್ಷ ಪ್ರಸಾದ್ ಕೆ.ಪಿ., ಸದಸ್ಯರಾದ ತುಳಸಿ, ಸುನೀತಾ, ಗೋಳಿತ್ತೊಟ್ಟು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಾಮಕೃಷ್ಣ ಭಟ್, ಮಾಜಿ ಅಧ್ಯಕ್ಷ ಕುಶಾಲಪ್ಪ ಗೌಡ ಅನಿಲ, ನೆಲ್ಯಾಡಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕೃಷ್ಣಾನಂದ, ಅಂಗನವಾಡಿ ಮೇಲ್ವಿಚಾರಕಿ ಉಮಾವತಿ ಉಪಸ್ಥಿತರಿದ್ದರು. ಅಂಗನವಾಡಿ ಕಾರ್‍ಯಕರ್ತೆ ರೀತಾಕ್ಷಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸ್ತ್ರೀಶಕ್ತಿ ಸಂಘದ ಸದಸ್ಯೆ ಪ್ರಮೀಳಾ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.