ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಸಂಯೋಜಕರಾಗಿ ನೂರುದ್ದೀನ್ ಸಾಲ್ಮರ

Puttur_Advt_NewsUnder_1
Puttur_Advt_NewsUnder_1

nuruddimಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ರಾಜ್ಯ ಸಂಯೋಜಕರಾಗಿ ನ್ಯಾಯವಾದಿ ಮತ್ತು ನೋಟರಿ ನೂರುದ್ದೀನ್ ಸಾಲ್ಮರರವರನ್ನು ಕೆಪಿಸಿಸಿ  ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷರಾದ  ಸಯೀದ್  ಅಹಮ್ಮದ್‌ರವರು ಎಐಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುರ್ಷಿದ್ ಅಹಮದ್  ರವರ ಆದೇಶದ ಮೇರೆಗೆ ನೇಮಕ ಮಾಡಿದ್ದಾರೆ.

ವಿದ್ಯಾರ್ಥಿ ಕಾಂಗ್ರೆಸ್ ಮೂಲಕ ರಾಜಕೀಯ ಪ್ರವೇಶಿಸಿದ ನೂರುದ್ದೀನ್‌ರವರು ದಕ್ಷಿಣ ಕನ್ನಡ ಎನ್‌ಎಸ್‌ಯುಐ ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ನಂತರ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಪಕ್ಷದ ವಕ್ತಾರ ರಾಗಿ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಪ್ರಸ್ತುತ ಜಿಲ್ಲಾ ವಕ್ಫ್ ಕಮಿಟಿಯ ಸಲಹಾ ಸಮಿತಿ ಸದಸ್ಯರಾಗಿ, ದಕ ಹಾಗೂ ಉಡುಪಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಪ್ರಧಾನ ಕಾರ್ಯದರ್ಶಿಯಾಗಿ, ಪುತ್ತೂರು ತಾಲೂಕು ಅಹಿಂದ ಅಧ್ಯಕ್ಷರಾಗಿ, ಅನ್ಸಾರುದ್ದೀನ್ ಅನಾಥಾಶ್ರಮದ ಪ್ರ. ಕಾರ್ಯದರ್ಶಿ ಯಾಗಿ, ಅಖಿಲ ಭಾರತ ಮಿಲ್ಲಿ  ಕೌನ್ಸಿಲ್‌ನ ಜಿಲ್ಲಾ ಸದಸ್ಯರಾಗಿ ಹಲವಾರು ಧಾರ್ಮಿಕ ಸಾಮಾಜಿಕ ಕ್ಷೇತ್ರದಲ್ಲಿ ತನ್ನನು ತಾನು ತೊಡಗಿಸಿಕೊಂಡಿದ್ದಾರೆ. ಪುತ್ತೂರಿನ ಪ್ರತಿಷ್ಠಿತ ವಿವೇಕಾನಂದ ಕಾನೂನು ಮಹಾ ವಿದ್ಯಾಲಯದಲ್ಲಿ ಕಾನೂನು ಪದವಿ ಪೂರೈಸಿದ ಮೊದಲ ತಂಡದ ವಿದ್ಯಾರ್ಥಿಗಳಲ್ಲಿ ಓರ್ವರಾದ ನೂರುದ್ದೀನ್ ರವರು ಪುತ್ತೂರಿನಲ್ಲಿ ಕಳೆದ ೨೨ ವರ್ಷಗಳಿಂದ ನ್ಯಾಯವಾದಿ ಮತ್ತು ನೋಟರಿಯಾಗಿ  ಸೇವೆ ಸಲ್ಲಿಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.