ಕೆಮ್ಮಿಂಜೆ ಷಣ್ಮುಖ ಸುಬ್ರಹ್ಮಣ್ಯ-ಮಹಾವಿಷ್ಣು ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ; 5 ಸಾವಿರಕ್ಕೂ ಅಧಿಕ ಭಕ್ತಾದಿಗಳಿಗೆ ಅನ್ನದಾನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮತ್ತು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ  ದ.2ರಿಂದ 5 ರತನಕ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ದ.2ರಿಂದ ಪ್ರಾರಂಭವಾದ ಕಾರ್ಯಕ್ರಮದಲ್ಲಿ  ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ದಿ, ರಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತು ಬಲಿ ರಾತ್ರಿ ಮಹಾಪೂಜೆ ನಡೆಯಿತು. ದ.3ರಂದು ಬೆಳಿಗ್ಗೆ 12 ತೆಂಗಿನಕಾಯಿ ಗಣಪತಿ ಹವನ, ಬಿಂಬ ಶುದ್ದಿ ಕಲಶ ಪೂಜೆ, ಪಂಚವಿಂಶತಿ ಕಲಶ ಪೂಜೆ, ದೇವರಿಗೆ ಕಲಾಶಾಭಿಷೇಕ ರಾತ್ರಿ ಕಾರ್ತಿಕ ಪೂಜೆ ನಡೆಯಿತು. ದ.೪ರಂದು ನಾಗಬನದಲ್ಲಿ ಸಾಮೂಹಿಕ ನಾಗತಂಬಿಲ ಮತ್ತು ಆಶ್ಲೇಷ ಬಲಿ, ಮಧ್ಯಾಹ್ನ ಮಹಾಪೂಜೆ, ರಾತ್ರಿ ದೇವರ ಬಲಿ, ಪಂಚಮಿ ಮಹೋತ್ಸವ, ಪಲ್ಲಕಿ ಉತ್ಸವ ಹಾಗೂ ಕಟ್ಟೆ ಪೂಜೆ ನಡೆಯಿತು. ಬಳಿಕ ಶಿರಾಡಿ ದೈವದ ಕಿರುವಾಳು ಆಗಮಿಸಿತು. ದ.೫ರಂದು ಶ್ರೀದೇವರ ಬಲಿ ಹೊರಟು ಷಷ್ಠಿ ಮಹೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಸುಮಾರು ೫ ಸಾವಿರಕ್ಕೂ ಅಧಿಕ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಅನ್ನ ಪ್ರಸಾದ ಸ್ವೀಕರಿಸಿ ಪುನೀತರಾದರು. ರಾತ್ರಿ ರಂಗ ಪೂಜೆ, ಮಹಾಪೂಜೆ, ಮಂತ್ರಾಕ್ಷತೆ ಹಾಗೂ ದೈವಗಳ ನೇಮೋತ್ಸವ ನಡೆಯಿತು.

dsc_3398 dsc_3401 dsc_3389 dsc_3399

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.