Breaking News

ಆರ್ಯಾಪು ಶಾಲಾ ವಾರ್ಷಿಕೋತ್ಸವ ಬಾಲ್ಯದಲ್ಲೇ ಮಕ್ಕಳ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿದಲ್ಲಿ ಮುಂದಿನ ಜೀವನಕ್ಕೆ ಸಹಕಾರಿ -ಮೀನಾಕ್ಷಿ

Puttur_Advt_NewsUnder_1
Puttur_Advt_NewsUnder_1

 

aryapuಸಂಪ್ಯ: ಬಾಲ್ಯದಲ್ಲೇ ಮಕ್ಕಳಲ್ಲಿರುವ ಪ್ರತಿಭೆಗೆ ಪ್ರೋತ್ಸಾಹ ಕೊಟ್ಟು ಸೂಕ್ತ ಅವಕಾಶ ನೀಡಿದಲ್ಲಿ ಮಕ್ಕಳ ಮುಂದಿನ ಉತ್ತಮ ಜೀವನಕ್ಕೆ ಸಹಕಾರಿಯಾಗುತ್ತದೆ. ಮಕ್ಕಳು ಹೆಚ್ಚು ಹೆಚ್ಚು ಅವಕಾಶ ಗಳನ್ನು ಬಳಸಿಕೊಳ್ಳಬೇಕು ಎಂದು ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ತಿಳಿಸಿದರು.

ಅವರು ದ.೩ರಂದು ಜರಗಿದ ಆರ್ಯಾಪು ಶಾಲಾ ವಾರ್ಷಿ ಕೋತ್ಸವದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಅಧ್ಯಕ್ಷತೆಯನ್ನು ಪುತ್ತೂರು ನಗರಸಭಾ ಅಧ್ಯಕ್ಷೆ ಜಯಂತಿ ಬಲ್ನಾಡು ವಹಿಸಿದ್ದರು. ತಾ.ಪಂ. ಸದಸ್ಯ ಸಾಜ ರಾಧಾಕೃಷ್ಣ ಆಳ್ವ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಸಂಪ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಅಬ್ದುಲ್ ಖಾದರ್, ಪುತ್ತೂರು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಶಾಲಿನಿ, ಎಸ್‌ಡಿಎಂಸಿ ಅಧ್ಯಕ್ಷ ಇಬ್ರಾಹಿಂ ಸಂಪ್ಯ ಭಾಗವಹಿಸಿದರು.

ಪಠ್ಯ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಬಹುಮಾನ ವಿಜೇತರ ಪಟ್ಟಿಯನ್ನು ಸಹಶಿಕ್ಷಕಿ ಶೇಷಮ್ಮ ವಾಚಿಸಿದರು. ಶಾಲಾ ಕ್ರೀಡೋತ್ಸವಕ್ಕೆ ಸಹಕಾರ ನೀಡಿದವರನ್ನು ಹಾಗೂ ಎಸ್‌ಡಿಎಂಸಿ ಸದಸ್ಯರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಸಹಶಿಕ್ಷಕಿ ಕೆ. ಸಬಿನಾ ನೊರೊನ್ಹಾ ಸನ್ಮಾನಿತರ ಪಟ್ಟಿಯನ್ನು ವಾಚಿಸಿದರು. ಶಾಲಾ ಮುಖ್ಯಗುರು ತಾಬ್ರ ಸ್ವಾಗತಿಸಿದರು. ಶಿಕ್ಷಕಿ ಪ್ಲೋರಿನ್ ನಿರೂಪಿಸಿ, ವಂದಿಸಿದರು. ಎಸ್‌ಡಿಎಂಸಿ ಉಪಾಧ್ಯಕ್ಷೆ ಪ್ರೇಮಲತಾ, ಸದಸ್ಯರುಗಳಾದ ಸುನಂದ, ಸವಿತಾ, ಅಬೂಬಕ್ಕರ್ ಸಂಪ್ಯ, ಮಾಜಿ ಅಧ್ಯಕ್ಷ ಜಬ್ಬಾರ್ ಸಂಪ್ಯ ಅತಿಥಿಗಳಿಗೆ ಹೂ ನೀಡಿ ಸ್ವಾಗತಿಸಿದರು. ಗೌರವ ಶಿಕ್ಷಕಿ ಕೆ. ನಾಗವೇಣಿ ಸಹಕರಿಸಿದರು. ಬೆಳಿಗ್ಗೆ ನಡೆದ ಸಮಾರಂಭದಲ್ಲಿ ಜೆ.ಕೆ. ಕನ್‌ಸ್ಟ್ರಕ್ಷನ್ ಮಾಲಕ ಜಯಕುಮಾರ್ ಆರ್. ನಾಯರ್ ಧ್ವಜಾರೋಹಣ ಗೈದರು. ಮುಖ್ಯ ಅತಿಥಿಗಳಾಗಿ ಆರ್ಯಾಪು ಗ್ರಾ.ಪಂ. ಸದಸ್ಯ ವಿಜಯ ಬಿ.ಎಸ್., ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಣ್ಣಿ ಪೂಜಾರಿ ಸಂಪ್ಯ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಇಬ್ರಾಹಿಂ ಕೆ. ವಹಿಸಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ಮಕ್ಕಳಿಂದ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ, ಕುಸುಮ ಸಾರಂಗ್ ಹರ್ಷಿತ್ ಪಡ್ರೆ ನಿರ್ದೇಶನದ ’ಪ್ರಶ್ನೆ’ ನಾಟಕ ಹಾಗೂ ಭಾವನಾ ಕಲಾ ಆರ್ಟ್ಸ್ ಬೊಳುವಾರು ಇವರಿಂದ ಸಾಂಸ್ಕೃತಿಕ ವೈಭವ ನಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.