Breaking News

ಕಡಬ ಪ.ಪೂ.ಕಾಲೇಜಿನಲ್ಲಿ ನಡೆಯುತ್ತಿದ್ದ ಪಿಯುಸಿ ಪರೀಕ್ಷಾ ಕೇಂದ್ರ ಬದಲಾವಣೆ ಬೇಡ- ಯಥಾಸ್ಥಿತಿ ಮುಂದುವರಿಸಲು ಡಿಡಿಪಿಐಗೆ ಸಚಿವ ರೈ ಸೂಚನೆ

Puttur_Advt_NewsUnder_1
Puttur_Advt_NewsUnder_1

ಕಡಬ: ಕಳೆದ 10 ವರ್ಷಗಳಿಂದ ಕಡಬ ಹೋಬಳಿ ಮಟ್ಟದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಡಬ ಪ.ಪೂ ಕಾಲೇಜಿನಲ್ಲಿ ಪಿ.ಯು.ಸಿ ಪರೀಕ್ಷೆ ನಡೆಯುತ್ತಿದ್ದು 2016-17 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ದೂರದ ರಾಮಕುಂಜದಲ್ಲಿ ನಡೆಸುವ ಬಗ್ಗೆ ಶಿಕ್ಷಣ ಇಲಾಖೆಯ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂಬ ಮಾಹಿತಿಯ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರ ಬದಲಾಯಿಸದಂತೆ ಕಡಬ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್‌ರವರ ನೇತೃತ್ವದಲ್ಲಿ ಕಡಬ ತಾ.ಪಂ. ಸದಸ್ಯ ಫಝಲ್ ಸೇರಿದಂತೆ ನಿಯೋಗವೊಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಯಾವುದೇ ಕಾರಣಕ್ಕೂ ಪರೀಕ್ಷೆ ಕೇಂದ್ರವನ್ನು ಕಡಬದಿಂದ ಬದಲಾಯಿಸಬಾರದೆಂದು ಒತ್ತಾಯಿಸಿದ್ದಾರೆ. ಕಡಬ ಹೋಬಳಿ ಸಂಬಂದಪಟ್ಟಂತೆ ನೂಜಿಬಾಳ್ತಿಲ ಬೆಥನಿ ಪ.ಪೂ.ಕಾಲೇಜು, ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ, ಕಡಬ ಸರಸ್ವತಿ ವಿದ್ಯಾಸಂಸ್ಥೆ, ಏಮ್ಸ್ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಕಡಬ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತೀ ವರ್ಷ ಕಡಬ ಪ.ಪೂ.ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆ ನಡೆಯುತ್ತಿದ್ದು ಗ್ರಾಮೀಣ ಭಾಗದಿಂದ ವಾಹನ ಸೌಲಭ್ಯವಿಲ್ಲದೆ ಬೇರೆ ಬೇರೆ ಖಾಸಗಿ ವಾಹನಗಳಲ್ಲಿ ಬಂದು ಪರೀಕ್ಷೆ ಎದುರಿಸುತ್ತಿದ್ದರು. ಈ ವರ್ಷ ರಾಮಕುಂಜಕ್ಕೆ ಹೋಗಬೇಕಾದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಾಹನದ ವ್ಯವಸ್ಥೆಯೂ ಇಲ್ಲದೆ ಯಾವುದಾದರೂ ಖಾಸಗಿ ವಾಹನ ಅವಲಂಭಿಸಿ ಹೋಗುವಷ್ಟರಲ್ಲಿ ಅಲ್ಲಿ ಪರೀಕ್ಷೆ ಪ್ರಾರಂಭವಾಗಬಹುದು ಎಂದು ಆತಂಕ ವ್ಯಕ್ತ ಪಡಿಸಿರುವ ಪೋಷಕರು ಕಡಬದಲ್ಲಿಯೇ ಪರೀಕ್ಷೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ದ.೪ ರಂದು ನಿಯೋಗ ತೆರಳಿ ಸಚಿವರಿಗೆ ಜಿಲ್ಲಾಧಿಕಾರಿಗಳಿಗೆ, ಡಿಡಿಪಿಐ ಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಮನವಿ ಬಗ್ಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಸಂಬಂದಪಟ್ಟ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರಿಗೆ ದೂರವಾಣಿ ಕರೆಮಾಡಿ ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರವನ್ನು  ಬದಲಾವಣೆ ಮಾಡದಂತೆ ಸೂಚಿಸಿರುತ್ತಾರೆ ಎಂದು ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ ಹಾಗೂ ತಾ.ಪಂ.ಸದಸ್ಯ ಫಝಲ್ ಕೋಡಿಂಬಾಳ ತಿಳಿಸಿದ್ದಾರೆ. ವಿಚಾರದ ಬಗ್ಗೆ ಸಂಬಂದಪಟ್ಟ ಅಧಿಕಾರಿಗಳು ದ.೫ ರಂದು ಕಡಬಕ್ಕೆ ಬಂದು ಪರಿಶೀಲಿಸಿ ಬಳಿಕ ಕಡಬ ಗ್ರಾ.ಪಂ.ನಲ್ಲಿ ಸಂಬಂದಪಟ್ಟ ಜನಪ್ರತಿನಿಧಿಗಳನ್ನು ಭೇಟಿಮಾಡಿ ಮಾತುಕತೆ ನಡೆಸಿರುತ್ತಾರೆ ಎಂದು ತಿಳಿದು ಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.