ನಗರಸಭಾ ಸದಸ್ಯ ಅಬ್ದುಲ್ ಹಮೀದ್ ನಿಧನ

Puttur_Advt_NewsUnder_1
Puttur_Advt_NewsUnder_1

abdul-hameedಪುತ್ತೂರು: ಪುತ್ತೂರು ನಗರಸಭಾ ನಾಮನಿರ್ದೇಶಿತ ಸದಸ್ಯ ಒಳತ್ತಡ್ಕದ ನಿವಾಸಿಯಾಗಿದ್ದ ಅಬ್ದುಲ್ ಹಮೀದ್ (54.ವ) ಕೆಲವು ದಿನಗಳ ಅಸೌಖ್ಯದಿಂದ ದ.7ರಂದು ರಾತ್ರಿ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನ ಹೊಂದಿದರು. ಕಟ್ಟಡ ಗುತ್ತಿಗೆದಾರರಾಗಿದ್ದು ಈ ಹಿಂದೆ ಪರ್ಲಡ್ಕ ಬೀರಮಲೆ ವಾರ್ಡ್‌ನಿಂದ ಕಾಂಗ್ರೆಸ್ ಪಕ್ಷದಿಂದ ಪುರಸಭಾ ಸದಸ್ಯರಾಗಿ ಚುನಾಯಿತರಾಗಿದ್ದ ಅಬ್ದುಲ್ ಹಮೀದ್‌ರವರು ಬಳಿಕ ಮೀಸಲಾತಿಯ ಹಿನ್ನೆಲೆಯಲ್ಲಿ ಆ ಕ್ಷೇತ್ರದಿಂದ ನಗರಸಭಾ ಚುನಾವಣೆಗೆ ಸ್ಪರ್ಧಿಸಲು ಅಸಾಧ್ಯವಾಗಿತ್ತು. ಬಳಿಕ ನಗರಸಭೆಯ ನಾಮನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿದ್ದರು. ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಕಾರ್ಯಕರ್ತರಾಗಿ ದುಡಿಯುತ್ತಿದ್ದ ಇವರು ಒಳತ್ತಡ್ಕ ಮಸೀದಿಯ ಅಧ್ಯಕ್ಷರಾಗಿ  ಪರ್ಲಡ್ಕ ಜುಮಾ ಮಸೀದಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ತಾಯಿ, ಪತ್ನಿ, ಮೂವರು ಪುತ್ರಿಯರು ಹಾಗೂ ಓರ್ವ ಪುತ್ರ,  ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.