ನೆಲ್ಯಾಡಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ

Puttur_Advt_NewsUnder_1
Puttur_Advt_NewsUnder_1

nelyady

ನೆಲ್ಯಾಡಿ: ಇಲ್ಲಿನ ಸಂತ ಜಾರ್ಜ್ ವಿದ್ಯಾ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ನಡೆಯಿತು. ಯುವಜನ ಸಬಲೀಕರಣದ ಅಧಿಕಾರಿ, ಸಂಸ್ಥೆಯ ಪೂರ್ವ ವಿದ್ಯಾರ್ಥಿಯೂ ಆಗಿರುವ ಮಾಮಚ್ಚನ್ ಕ್ರೀಡಾಕೂಟವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ಕ್ರೀಡಾ ಕೂಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಬದುಕಿನಲ್ಲಿ ಶಿಸ್ತು, ಸಂಯಮ ಮತ್ತು ಮನೋದಾರ್ಥ್ಯವನ್ನು ಹೊಂದಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಸಾಮಾಜಿಕ ಜೀವನದಲ್ಲಿ ಮುಂದೆ ಬರಲು ಕ್ರೀಡೆಯು ಸಹಕಾರಿಯಾಗಿದೆ ಎಂದು ನುಡಿದರು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗೀಸರು ಕ್ರೀಡಾಪಟುಗಳು ಕ್ರೀಡಾ ಮನೋಭಾವದಲ್ಲಿ ಸ್ಫರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಗೆಲ್ಲಬೇಕೆಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವೃತ್ತಿ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರಿದ ಮಾಮಚ್ಚನ್‌ರವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ವಿದ್ಯಾರ್ಥಿಗಳಿಗಾಗಿ ಆಕರ್ಷಕ ಪಥ ಸಂಚಲನ ಮತ್ತು ಕವಾಯತು ಪ್ರದರ್ಶನ ನಡೆಯಿತು. ಸಂಸ್ಥೆಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎಂ.ಕೆ. ಏಲಿಯಾಸ್ ಉಪಸ್ಥಿತರಿದ್ದರು. ಕನ್ನಡ ಮಾಧ್ಯಮದ ಮುಖ್ಯ ಗುರು ರವೀಂದ್ರ ಟಿ. ಸ್ವಾಗತಿಸಿ, ಆಂಗ್ಲ ಮಾಧ್ಯಮದ ಮುಖ್ಯ ಗುರು ಹರಿಪ್ರಸಾದ್ ಕೆ. ವಂದಿಸಿದರು. ಸಂಯೋಜಕರಾದ ಭವ್ಯಾ ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಉಪನ್ಯಾಸಕ ಚೇತನ್ ಆನೆಗುಂಡಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.