ರಾಮಕುಂಜ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Puttur_Advt_NewsUnder_1
Puttur_Advt_NewsUnder_1

ramakinja_2ಕಲಿತ ಸಂಸ್ಥೆಗೆ ವಿದ್ಯಾರ್ಥಿಗಳು ಕೀರ್ತಿ ತರುವಂತಾಗಬೇಕು: ಸುಬ್ರಹ್ಮಣ್ಯ ಸ್ವಾಮೀಜಿ

ರಾಮಕುಂಜ: ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಅಧೀನದಲ್ಲಿರುವ ಶ್ರೀ ರಾಮಕುಂಜೇಶ್ವರ ವೃತ್ತಿಪರ ಶಿಕ್ಷಣ ಅಭಿವೃದ್ಧಿ ಕೇಂದ್ರದ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆ, ಶ್ರೀ ರಾಮಕುಂಜೇಶ್ವರ ವಿದ್ಯಾರ್ಥಿನಿಲಯ ಮತ್ತು ಶ್ರೀ ರಾಮಕುಂಜೇಶ್ವರ ಕಿಂಡರ್ ಗಾರ್ಟನ್‌ನ ವಾರ್ಷಿಕೋತ್ಸವ ದ.10ರಂದು ನಡೆಯಿತು.

ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಭಾ ಕಾರ‍್ಯಕ್ರಮದಲ್ಲಿ ಆಶೀರ್ವಚನ ನೀಡಿದ ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ವಿದ್ಯಾರ್ಥಿ ಜೀವನ ಸುಖಕ್ಕಾಗಿ ಇರುವಂತದ್ದಲ್ಲ, ವಿದ್ಯಾರ್ಥಿ ಜೀವನದಲ್ಲಿ ಕಷ್ಟಪಟ್ಟಲ್ಲಿ ಮುಂದೆ ಸುಖ ಜೀವನ ನಡೆಸಬಹುದು. ಜೀವನವೆಂಬುದು ಭಗವಂತ ಕೊಟ್ಟಿರುವ ಅಪೂರ್ವ ಕೊಡುಗೆಯಾಗಿದೆ. ಇದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಬೇಕೆಂದು ಹೇಳಿದರು. ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಯಲ್ಲಿ ಬೌದ್ಧಿಕ, ನೈತಿಕ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಬೆಳೆಸುತ್ತಿದೆ. ಈ ಮೂಲಕ ತಾನು ಬೆಳೆಯುತ್ತಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗೆ ಕೀರ್ತಿ ತರುವಂತವರಾಗಬೇಕೆಂದು ಸ್ವಾಮೀಜಿ ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಉಪನ್ಯಾಸಕ ಮಾಧವ ಆಚಾರ್ ಇಜ್ಜಾವು ಮಾತನಾಡಿ, ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆ ಲೋಕಮಾನ್ಯರಾಗಿರುವ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ನಡೆಯುತ್ತಿದೆ. ಇದೊಂದು ಸೇವಾ ಸಂಸ್ಥೆಯಾಗಿದೆ. ಇಲ್ಲಿ ಮಕ್ಕಳಿಗೆ ವಿದ್ಯೆಯೊಂದಿಗೆ ಪಠ್ಯೇತರ ಚಟುವಟಿಕೆಯಲ್ಲೂ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.

ಮುಖ್ಯ ಅತಿಥಿಗಳಾಗಿದ್ದ ಹಾಸನ ಜಿಲ್ಲಾಪಂಚಾಯತ್‌ನ ಅಧೀಕ್ಷಕ ಕುಮಾರ್, ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನ ಕಂಕನಾಡಿ ಶಾಖಾ ವ್ಯವಸ್ಥಾಪಕ ಪರಮೇಶ್ವರ ಕಾರಂತ್, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ‍್ಯದರ್ಶಿ ಕೆ.ಎಸ್.ರಾಧಾಕೃಷ್ಣರವರು ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು.

ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ:

ಕಾರ‍್ಯಕ್ರಮದಲ್ಲಿ ಸಂಸ್ಥೆಯ ಸಾಧಕ ವಿದ್ಯಾರ್ಥಿಗಳಾದ ದಂತವೈದ್ಯೆ ಡಾ.ಕಾರ್ತಿಕಾ, ಬೆಂಗಳೂರಿನಲ್ಲಿ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರ್‌ಗಳಾಗಿರುವ ರಕ್ಷಿತ್ ಶೆಟ್ಟಿ ಕೆ., ಆದಿತ್ಯ ಇ., ಮೆಕ್ಯಾನಿಕಲ್ ಇಂಜಿನಿಯರ್‌ಗಳಾಗಿರುವ ವಿಘ್ನೇಶ್ ಮಲ್ಯ, ಸಂದೇಶ್ ಆಚಾರ‍್ಯ, ಉಡುಪಿ ಕಂದಾಯ ಇಲಾಖೆಯಲ್ಲಿ ಉದ್ಯೋಗಿಗಳಾಗಿರುವ ಅಮೃತಾಂಶು ಕೆ.ಎಸ್., ಕವಿತಾ ಕೆ.,ರವರನ್ನು ಸ್ವಾಮೀಜಿ ಸನ್ಮಾನಿಸಿದರು. ಸಾಧಕ ವಿದ್ಯಾರ್ಥಿ ವಿಘ್ನೇಶ್ ಮಲ್ಯರವರು ಬಿಡಿಸಿರುವ ಉಡುಪಿ ಪೇಜಾವರ ಶ್ರೀಗಳ ಭಾವಚಿತ್ರವನ್ನು ಸುಬ್ರಹ್ಮಣ್ಯಶ್ರೀಗಳಿಗೆ ಇದೇ ವೇಳೆ ಹಸ್ತಾಂತರಿಸಿದರು.

ಪ್ರತಿಭಾ ಪುರಸ್ಕಾರ:

ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಚಿದಾನಂದ, ಜ್ಯೋತಿಕಾರನ್ನು ಶಾಲು ಹೊದಿಸಿ, ಫಲಪುಷ್ಪ ನೀಡಿ ಸ್ವಾಮೀಜಿ ಸನ್ಮಾನಿಸಿದರು. ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಲಾಯಿತು. ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ತರಗತಿಗಳಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದುಕೊಂಡ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಾಹಿತ್ಯದಲ್ಲಿನ ಸೇವೆಗಾಗಿ ವಿದ್ಯಾರ್ಥಿನಿ ಅನ್ವಿತಾ, ಪಂಜದಲ್ಲಿ ನಡೆದ ರಾಷ್ಟ್ರೀಯ ಹಿರಿಯರ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದುಕೊಂಡು ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಪ್ರೇಮಾರವರನ್ನು ಸ್ವಾಮೀಜಿ ಸನ್ಮಾನಿಸಿದರು. ಹಾಸನ ಜಿಲ್ಲಾ ಪಂಚಾಯತ್ ಅಧೀಕ್ಷಕ ಕುಮಾರ್‌ರವರು ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆಯ ಕಾರ‍್ಯದರ್ಶಿ ಕೆ.ಸೇಸಪ್ಪ ರೈಯವರನ್ನು ಶಾಲು ಹೊದಿಸಿ, ಫಲಪುಷ್ಪ ನೀಡಿ ಸನ್ಮಾನಿಸಿದರು.

ಪುಸ್ತಕ ಬಿಡುಗಡೆ:

ಸಂಸ್ಥೆಯ ವತಿಯಿಂದ ರಚನೆಗೊಂಡ ಆಟಿ ಅಮಾವಾಸ್ಯೆ ಕುರಿತ’ಆಟಿಯ ನೋಟ’ಪುಸ್ತಕವನ್ನು ಸುಬ್ರಹ್ಮಣ್ಯ ಸ್ವಾಮೀಜಿ ಈ ವೇಳೆ ಬಿಡುಗಡೆಗೊಳಿಸಿದರು. ಶಿಕ್ಷಕಿ ಸರಿತಾ ಜನಾರ್ದನರವರ ಕವನಗಳನ್ನೊಳಗೊಂಡ ಪುಸ್ತಕವನ್ನು ಇದೇ ವೇಳೆ ಸುಬ್ರಹ್ಮಣ್ಯ ಸ್ವಾಮೀಜಿ ಬಿಡುಗಡೆಗೊಳಿಸಿದರು.

ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಅಧ್ಯಕ್ಷ ಕೃಷ್ಣಮೂರ್ತಿ ಕಲ್ಲೇರಿ, ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನ ಪ್ರಾಂಶುಪಾಲ ಸಂಕೀರ್ತ ಹೆಬ್ಬಾರ್, ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಪ್ರಾಂಶುಪಾಲ ಸತೀಶ್ ಭಟ್, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲಾ ಮುಖ್ಯಶಿಕ್ಷಕ ಸತೀಶ್ ಭಟ್, ಶ್ರೀ ರಾಮಕುಂಜೇಶ್ವರ ಸಂಸ್ಕೃತ ಹಿ.ಪ್ರಾ.ಶಾಲಾ ಮುಖ್ಯಶಿಕ್ಷಕ ಟಿ.ನಾರಾಯಣ ಭಟ್, ಮುಂಬೈ ಪೇಜಾವರ ಮಠದ ಮೇನೇಜರ್ ಪ್ರಕಾಶ್ ಭಟ್, ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ತೇಜಸ್ವಿನಿ ಶೇಖರ್ ಕಟ್ಟಪುಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಕಾರ‍್ಯದರ್ಶಿ ಕೆ.ಸೇಸಪ್ಪ ರೈ, ೧೯೯೫ರಲ್ಲಿ ೯ ವಿದ್ಯಾರ್ಥಿಗಳೊಂದಿಗೆ ಶ್ರೀ ರಾಮಕುಂಜೇಶ್ವರ ವಿದ್ಯಾರ್ಥಿನಿಲಯ ಆರಂಭಗೊಂಡಿದ್ದು ಈಗ ವಿವಿಧ ಜಿಲ್ಲೆಗಳ ೩೪೩ ವಿದ್ಯಾರ್ಥಿಗಳಿದ್ದು ೨೫ ಸಿಬ್ಬಂದಿಗಳಿದ್ದಾರೆ. ೨೦೦೧-೦೨ನೇ ಸಾಲಿನಲ್ಲಿ ೧೩ ವಿದ್ಯಾರ್ಥಿಗಳೊಂದಿಗೆ ಆಂಗ್ಲಮಾಧ್ಯಮ ಪ್ರೌಢಶಾಲೆ ಆರಂಭಗೊಂಡಿದ್ದು ಈಗ ೫೬೫ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ೨೦೦೯-೧೦ರಲ್ಲಿ ೬ ಮತ್ತು ೭ನೇ ತರಗತಿಗಳು, ೨೦೧೫-೧೬ರಲ್ಲಿ ಕಿಂಡರ್ ಗಾರ್ಟನ್ ಹಾಗೂ ೨೦೧೬-೧೭ರಿಂದ ಆಂಗ್ಲಮಾಧ್ಯಮ ಕಿರಿಯ ಪ್ರಾಥಮಿಕ ತರಗತಿಗಳು ಆರಂಭಗೊಂಡಿವೆ. ಇದರೊಂದಿಗೆ ಕಂಪ್ಯೂಟರ್ ಡಿಪ್ಲೋಮಾ ತರಗತಿಗಳು ನಡೆಯುತ್ತಿವೆ. ಎಸ್‌ಎಸ್‌ಎಲ್‌ಸಿಯಲ್ಲಿ ಪ್ರತಿವರ್ಷವೂ ಉತ್ತಮ ಫಲಿತಾಂಶ ದಾಖಲಿಸಿಕೊಂಡು ಬರುತ್ತಿದೆ ಎಂದು ಹೇಳಿದರು. ಇದರೊಂದಿಗೆ ಕ್ರೀಡೆಯಲ್ಲೂ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರಮಟ್ಟದಲ್ಲೂ ಮಿಂಚಿದ್ದಾರೆ ಎಂದು ಸೇಸಪ್ಪ ರೈ ಹೇಳಿದರು.

ಶಾಲಾ ಮುಖ್ಯಶಿಕ್ಷಕ ಗಾಯತ್ರಿ ಯು.ಎನ್.,ವಂದಿಸಿದರು. ಸಹಶಿಕ್ಷಕ ರಾಧಾಕೃಷ್ಣ ಕಾರ‍್ಯಕ್ರಮ ನಿರೂಪಿಸಿದರು. ಸಭಾ ಕಾರ‍್ಯಕ್ರಮಕ್ಕೆ ಮೊದಲು ಹಾಗೂ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ನಡೆಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.