Breaking News

ಪಟ್ಟೆ ಪ್ರತಿಭಾ ಪ್ರೌಢ ಶಾಲಾ ಬೆಳ್ಳಿ ಹಬ್ಬ-ಸಮಾಲೋಚನಾ ಸಭೆ

Puttur_Advt_NewsUnder_1
Puttur_Advt_NewsUnder_1

1-patte

ಬಡಗನ್ನೂರು: ವಿದ್ಯಾಸಂಸ್ಥೆಯನ್ನು ಕಟ್ಟಿ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದ್ದು ಈ ದೃಷ್ಟಿಯಿಂದ ಅವರ ಸೇವೆಯನ್ನು ಗುರುತಿಸಿ ಈ ಸಂದರ್ಭದಲ್ಲಿ ಸನ್ಮಾನಿಸುವುದು ನಮ್ಮ ಕರ್ತವ್ಯ ಎಂದು ತಾ.ಪಂ.ಸದಸ್ಯ ರಾಧಾಕೃಷ್ಣ ಬೋರ್ಕರ್ ತಿಳಿಸಿದರು. ಅವರು ಪಟ್ಟೆ ಪ್ರತಿಭಾ ಪ್ರೌಢ ಶಾಲಾ ಬೆಳ್ಳಿ ಹಬ್ಬದ ಕುರಿತು ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.

ವಿದ್ಯಾಸಂಸ್ಥೆಗಳ  ಅಧ್ಯಕ್ಷ ವೇಣುಗೋಪಾಲ ಭಟ್ ಬಿ  ಅಧ್ಯಕ್ಷತೆ ವಹಿಸಿ ಮಾತನಾಡಿ  ಬೆಳ್ಳಿ ಹಬ್ಬ ಕಾರ್ಯಕ್ರಮ ಅವಿಸ್ಮರಣೀಯವಾಗುವ ದೃಷ್ಟಿಯಿಂದ ಕೆಲಸ ಆಗಬೇಕು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಸ್ಥಳೀಯರಿಗೆ ಪ್ರಥಮ ಅದ್ಯತೆ ನೀಡುವ ಬಗ್ಗೆ ತಿಳಿಸಿದರು. ಎರಡು ದಿವಸಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೇಕಾಗುವ ದೃಷ್ಟಿಯಿಂದ ಕಾರ್ಯಕ್ರಮದ ಮೊದಲು ಟ್ಯಾಂಕ್ ರಚನೆ ಮಾಡಲಾಗುವುದು.ಮತ್ತು   ಈಗಾಗಲೇ ಅಕ್ಷರದಾಸೋಹ ಕಟ್ಟಡಕ್ಕೆ ದಾನಿಗಳ ಸಹಕಾರದಿಂದ ಶೀಟ್  ಹಾಕಿ ವಿಸ್ತರಣೆ ಮಾಡಿದ್ದು  ಅಡಿ ಭಾಗಕ್ಕೆ ಮಕ್ಕಳು ಕುಳಿತು ಊಟ ಮಾಡಲು ಅನುಕೂಲವಾಗುವಂತೆ ವ್ಯವಸ್ಥೆ  ಮಾಡಲಾಗುವುದು ಎಂದು ತಿಳಿಸಿದರು.

ಸಭೆಯು ಡಿ.10ರಂದು ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಸಭಾ ಭವನದಲ್ಲಿ ನಡೆಯಿತು. ವೇದಿಕೆಯಲ್ಲಿ ಪಟ್ಟೆ ವಿದ್ಯಾಸಂಸ್ಥೆಗಳ ಸಂಚಾಲಕ ನಾರಾಯಣ ಭಟ್ ಬಿ. ನಿರ್ದೇಶಕರಾದ ಶಿವಪ್ರಸಾದ್ ಭಟ್ ಪಿ , ನಹುಷ್ ಪಿ.ವಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಿವರಾಮ ಭಟ್, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಸುಮನ ಉಪಸ್ಥಿತರಿದ್ದರು.

ಸಭೆಯಲ್ಲಿ ನಿವೃತ ಮುಖ್ಯ ಶಿಕ್ಷಕರಾದ ವೈ ಕೃಷ್ಣ ನಾಯ್ಕ, ನಾರಾಯಣ ಪಾಟಾಳಿ  ಪಡುಮಲೆ ಶಾಲಾ ಮುಖ್ಯ ಶಿಕ್ಷಕ ದೇವಿಪ್ರಸಾದ್ ಕೆ.ಸಿ, ಸುಬ್ಬಪ್ಪ ಪಾಟಾಳಿ ಪಟ್ಟೆ, ಕೃಷ್ಣ ಪಾಟಾಳಿ ಪಟ್ಟೆ ,  ಉಭಯ ವಿದ್ಯಾಸಂಸ್ಥೆಗಳ ಶಿಕ್ಷಕ ವೃಂದ ಮತ್ತು ಊರಿನವರು ಭಾಗವಹಿಸಿದರು. ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶಂಕರಿ ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಚಾರ್ಯೇ ನವ್ಯತಾ ರೈ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.