Breaking News

ಡಾ. ಬಿ.ಆರ್. ಅಂಬೇಡ್ಕರ್‌ರವರ 125ನೇ ಜನ್ಮದಿನಾಚರಣೆ; ದ.13ರಂದು ಬಿಜೆಪಿ ನಗರ ಮಹಿಳಾ ಮೋರ್ಛಾ ನೇತೃತ್ವದಲ್ಲಿ ರಕ್ತದಾನ, ರಕ್ತ ವರ್ಗೀಕರಣ ಶಿಬಿರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬಿಜೆಪಿ ನಗರ ಮಂಡಲದ ಮಹಿಳಾ ಮೋರ್ಛಾ ನೇತೃತ್ವದಲ್ಲಿ ಪುತ್ತೂರು ನಗರ ಯುವ ಮೋರ್ಛಾ, ಹಿಂದುಳಿದ ವರ್ಗಗಳ ಮೋರ್ಛಾ, ಅಲ್ಪಸಂಖ್ಯಾತ ಮೋರ್ಛಾ, ಎಸ್ಟಿ ಮೋರ್ಛಾ ಮತ್ತು ಎಸ್ಸಿ ಮೋರ್ಛಾದ ಸಹಯೋಗದೊಂದಿಗೆ ಡಾ. ಬಿ.ಆರ್ ಅಂಬೇಡ್ಕರ್‌ರವರ 125ನೇ ಜನ್ಮದಿನಾಚರಣೆ ಅಂಗವಾಗಿ ದ.13ರಂದು ರೋಟರಿ ಬ್ಲಡ್ ಬ್ಯಾಂಕ್‌ನಲ್ಲಿ ರಕ್ತದಾನ ಮತ್ತು ರಕ್ತ ವರ್ಗೀಕರಣ ಶಿಬಿರ ನಡೆಯಲಿದೆ.

ಬಿಜೆಪಿ ರಾಜ್ಯ ಸಹ ವಕ್ತಾರೆ ಸುಲೋಚನಾ ಜಿ.ಕೆ ಭಟ್‌ರವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಅಶೋಕ್ ಕುಮಾರ್ ರೈ, ಬಿಜೆಪಿ ಪುತ್ತೂರು ಮಂಡಲದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಮಂಡಲದ ಅಧ್ಯಕ್ಷ ಜೀವಂಧರ್ ಜೈನ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ನಗರ ಮಂಡಲದ ಮಹಿಳಾ ಮೋರ್ಛಾ ಅಧ್ಯಕ್ಷೆ ವಿದ್ಯಾ ಆರ್ ಗೌರಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.