ಅಪರಾಧ ತಡೆ ಮಾಸಾಚರಣೆ ಮಾಹಿತಿ ಕಾರ‍್ಯಕ್ರಮ

Puttur_Advt_NewsUnder_1
Puttur_Advt_NewsUnder_1

a_2

ಪುತ್ತೂರು: ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಮತ್ತು ನಗರ ಪೊಲೀಸ್ ಠಾಣೆ ಪುತ್ತೂರು ಇವುಗಳ ಆಶ್ರಯದಲ್ಲಿ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಮಾಹಿತಿ ಕಾರ‍್ಯಕ್ರಮವು ಹಿಂದುಳಿದ ವರ್ಗಗಳ ವಿದ್ಯಾರ್ಥಿನಿ ನಿಲಯ ಹಾರಾಡಿ ಇಲ್ಲಿ ನಡೆಯಿತು. ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ ರಮೇಶ್ ಉಳಯ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಒಮನಾ ಇವರು ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು. ಕಾನ್ಸ್ಟೇಬಲ್ ಹರೀಶ್ ರವರು ಅಪರಾಧ ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು. ಹಾರಾಡಿ ಶಾಲಾ ಮುಖ್ಯ ಶಿಕ್ಷಕರಾದ ಮುದರ, ಶಿಕ್ಷಣ ಸಂಪನ್ಮೂಲ ಕೇಂದ್ರದ ಸದಸ್ಯ ಹಾಗೂ ಅಖಿಲ ಭಾರತ ಅಪರಾಧ ನಿರ್ಮೂಲನಾ ಸಂಸ್ಥೆಯ ಜಿಲ್ಲಾ ಕಾರ‍್ಯದರ್ಶಿ ಲೋಕೇಶ್ ಗೌಡ ಅಲುಂಬುಡ, ವಿದ್ಯಾರ್ಥಿನಿ ನಿಲಯದ ಮೇಲ್ವಿಚಾರಕರಾದ ಪ್ರೇಮಲತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುವ ಜಯಕರ್ನಾಟಕ ಪಡೀಲ್ ಘಟಕದ ಅಧ್ಯಕ್ಷರಾದ ಹರೀಶ್.ಪಿ ಸ್ವಾಗತಿಸಿ, ಲಕ್ಷ್ಮೀಶ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.