ಸರ್ವೆ: ಕಲ್ಪಣೆ ಪ್ರೌಢಶಾಲೆಯಲ್ಲಿ ಬೈಸಿಕಲ್ ವಿತರಣೆ

sarve-15_2

ಪುತ್ತೂರು: ಸರ್ವೆ ಕಲ್ಪಣೆ ಪ್ರೌಢಶಾಲೆಯಲ್ಲಿ ಸರಕಾರದಿಂದ ನೀಡಲಾಗುವ ಉಚಿತ ಬೈಸಿಕಲ್ ವಿತರಣೆ ಡಿ.೧೫ರಂದು ನಡೆಯಿತು. ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡುರವರು ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಿಸುವ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಡೂರು ಗ್ರಾ.ಪಂ ಅಧ್ಯಕ್ಷ ಎಸ್.ಡಿ ವಸಂತ ವಹಿಸಿದ್ದರು. ಅತಿಥಿಗಳಾಗಿ ತಾ.ಪಂ ಸದಸ್ಯ ಶಿವರಂಜನ್, ಶಾಲಾ ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಶಿವನಾಥ ರೈ ಮೇಗಿನಗುತ್ತು, ಸದಸ್ಯ ಸದಾಶಿವ ರೈ ಬಾಳಾಯ, ಮುಂಡೂರು ಗ್ರಾ.ಪಂ ಸದಸ್ಯ ಉದಯಕುಮಾರ್, ತಾ.ಪಂ ಮಾಜಿ ಸದಸ್ಯೆ ಸುಮತಿ ಸರ್ವೆ ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಜಯರಾಮ ಶೆಟ್ಟಿ ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಉದಯಕುಮಾರ್ ಸ್ವಾಗತಿಸಿದರು. ವೆಂಕಟೇಶ್ ಕಾರ್ಯಕ್ರಮ ನಿರೂಪಿಸಿದರು. ಎಸ್‌ಡಿಎಂಸಿ ಸದಸ್ಯರು, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.