Breaking News

ದ.23: ಕುರಿಯಾಳಕೊಪ್ಪ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Puttur_Advt_NewsUnder_1
Puttur_Advt_NewsUnder_1

ಕಡಬ: ನೂಜಿಬಾಳ್ತಿಲ ಗ್ರಾಮದ ಕುರಿಯಾಳಕೊಪ್ಪ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಪ್ರಥಮ ಪ್ರತಿಷ್ಠಾ ವಾರ್ಷಿಕೋತ್ಸವ ದ.23ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಆಡಳಿತ ಮಂಡಳಿ ಅಧ್ಯಕ್ಷ ಮಹಾವೀರ ಜೈನ್ ಡೆಪ್ಪುಣಿಗುತ್ತು, ಉಪಾಧ್ಯಕ್ಷ ಭಾಸ್ಕರ ಗೌಡ ಇಚ್ಲಂಪಾಡಿ, ಕಾರ್ಯದರ್ಶಿ ಗಂಗಾಧರ ಕೆ.ಎಂ.,ಕುರಿಯಾಳಕೊಪ್ಪ, ಜೊತೆಕಾರ್ಯದರ್ಶಿಗಳಾದ ಹರಿಶ್ಚಂದ್ರ ಗೌಡ ಕನ್ವಾರೆ, ಪುರುಷೋತ್ತಮ ಗೌಡ ಕುಕ್ಕದಡಿ, ಕೋಶಾಧಿಕಾರಿ ವಿಶ್ವನಾಥ ರೈ ಐಲಗುತ್ತು ಹಾಗೂ ಸಮಿತಿ ಸದಸ್ಯರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದ.16ರಂದು ಬೆಳಿಗ್ಗೆ ಗೊನೆ ಕಡಿಯುವ ಮುಹೂರ್ತ, ದ.22ರಂದು ಬೆಳಿಗ್ಗೆ ಉಗ್ರಾಣ ಮುಹೂರ್ತ, ಊರಭಕ್ತಾದಿಗಳಿಂದ ಹಸಿರು ಹೊರೆ ಕಾಣಿಕೆ ಸಮರ್ಪಣೆ, ದ.23ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣೆ, ಮಹಾಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಶ್ರೀ ಭೂತಬಲಿ ಮಹೋತ್ಸವ, ವಸಂತ ಕಟ್ಟೆಪೂಜೆ, ದರ್ಶನಬಲಿ ಉತ್ಸವ, ಬಟ್ಟಲು ಕಾಣಿಕೆ ನಡೆಯಲಿದೆ. ಬಳಿಕ ದೇವರು ಒಳಗೆ ಹೋಗಿ ಮಂಗಳಾರತಿ, ವೈದಿಕ ಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.