ಡಿ 17ರಂದು ಸರ್ವೆ ಕಲ್ಪಣೆ ಪ್ರೌಢಶಾಲಾ ಬೆಳ್ಳಿಹಬ್ಬ ಸಂಭ್ರಮ ರಂಗ ಮಂದಿರ ಉದ್ಘಾಟನೆ- ಸಚಿವರ ಆಗಮನ

Puttur_Advt_NewsUnder_1
Puttur_Advt_NewsUnder_1

 

sarveಪುತ್ತೂರು: ಸರಕಾರಿ ಪ್ರೌಢಶಾಲೆ ಕಲ್ಪಣೆ, ಸರ್ವೆ ಇದರ ಬೆಳ್ಳಿಹಬ್ಬ ಸಂಭ್ರಮ ಡಿ.17ರಂದು ನಡೆಯಲಿದೆ. ಎ.ಪಿ.ಎಂ.ಸಿ ನಿರ್ದೇಶಕ ಅಬ್ದುಲ್ ಶಕೂರ್ ಹಾಜಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಭಾ ಕಾರ್ಯಕ್ರಮವನ್ನು ಶಾಸಕಿ, ರಾಜ್ಯ ಸಂಸದೀಯ ಕಾರ್ಯದರ್ಶಿ ಶಕುಂತಳಾ ಶೆಟ್ಟಿ ಉದ್ಘಾಟಿಸಲಿದ್ದಾರೆ. ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಮುಂಡೂರು ಗ್ರಾ.ಪಂ ಅಧ್ಯಕ್ಷ ಎಸ್.ಡಿ ವಸಂತ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ತಾ.ಪಂ ಅಧ್ಯಕ್ಷೆ ಭವಾನಿ ಚಿದಾನಂದ, ಸದಸ್ಯ ಶಿವರಂಜನ್, ಮಂಗಳೂರು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಎಸ್.ಬಿ ಜಯರಾಮ ರೈ ಬಳಜ್ಜ, ಸರ್ವೆ ಪಶು ವೈದ್ಯಾಧಿಕಾರಿ ಡಾ.ಪ್ರಸನ್ನ ಕುಮಾರ್ ಹೆಬ್ಬಾರ್, ಧ.ಗ್ರಾ.ಯೋ ಪುತ್ತೂರು ಯೋಜನಾಧಿಕಾರಿ ಧರ್ಣಪ್ಪ ಮೂಲ್ಯ, ಮುಂಡೂರು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಯಾಕೂಬ್ ಮುಲಾರ್, ಮುಂಡೂರು ಗ್ರಾ.ಪಂ ಉಪಾಧ್ಯಕ್ಷೆ ಸೌಮ್ಯಾ ಆರ್ ಕಂಬಳಿ,  ಸದಸ್ಯರಾದ ಯೋಗಿನಿ ರೈ ಮೇಗಿನಗುತ್ತು, ರಾಮಚಂದ್ರ ಸೊರಕೆ, ಹಂಝ ಎಲಿಯ, ಉದಯಕುಮಾರ್ ಬಾಕುಡ, ಸೀತಾ, ಕುಸುಮಾವತಿ ಪೆರಂಟೋಲು, ಪುತ್ತೂರು ಕ್ಷೇ.ಸಂ.ಕೇಂದ್ರ ಸಮನ್ವಯಾಧಿಕಾರಿ ವಿಷ್ಣು ಪ್ರಸಾದ್, ಮುಂಡೂರು ಗ್ರಾ.ಪಂ ಪಿಡಿಒ ಸುಜಾತಾ, ಮುಂಡೂರು ಪ್ರಾ.ಕೃ.ಪ.ಸ.ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ ರೈ ಚೆಲ್ಯಡ್ಕ, ಎಲ್‌ಐಸಿ ಎಂ.ಡಿ.ಆರ್.ಟಿ ಸಲಹೆಗಾರ ಜಿ.ಕೆ ಪ್ರಸನ್ನ, ಸರ್ವೆ ಕಲ್ಪಣೆ ಪ್ರಾ.ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ವೆಂಕಪ್ಪ ನಾಯ್ಕ ಎಲಿಯ, ಧ.ಗ್ರಾ.ಯೋ. ಸರ್ವೆ ಎ ಒಕ್ಕುಟದ ಅಧ್ಯಕ್ಷೆ ಪ್ರೇಮಾ ನೆಕ್ಕಿಲು, ಬಿ ಒಕ್ಕೂಟದ ಅಧ್ಯಕ್ಷ ಶಶಿಧರ ಎಸ್.ಡಿ, ಕಲ್ಪಣೆ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದು ಗೌಡ ಕಲ್ಪಣೆ ಭಾಗವಹಿಸಲಿದ್ದಾರೆ.

ರಾತ್ರಿ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕಿ ಶಕುಂತಳಾ ಶೆಟ್ಟಿ ವಹಿಸಲಿದ್ದಾರೆ. ಅರಣ್ಯ ಸಚಿವರು ದ.ಕ ಜಿಲ್ಲಾ ಉಸ್ತುವಾರಿ ಸಚಿವರೂ ಆದ ರಮಾನಾಥ ರೈ ದೀಪ ಪ್ರಜ್ವಲನೆ ಮಾಡಲಿದ್ದಾರೆ. ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ ಖಾದರ್, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ, ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಂಸದ ನಳಿನ್ ಕುಮಾರ್ ಕಟೀಲ್, ಕಾಪು ಶಾಸಕ ವಿನಯಕುಮಾರ್ ಸೊರಕೆ, ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ಅಧ್ಯಕ್ಷೆ ದಿವ್ಯ ಪ್ರಬಾ ಚಿಲ್ತಡ್ಕ, ತಾ.ಪಂ ಸದಸ್ಯ ಶಿವರಂಜನ್, ಮುಂಡೂರು ಗ್ರಾ.ಪಂ ಅಧ್ಯಕ್ಷ ಎಸ್.ಡಿ ವಸಂತ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಾಲ್ಟರ್ ಡಿಮೆಲ್ಲೋ, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಜಿ.ಎಸ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ರಿಜಿಸ್ಟಾರ್ ಚಂದ್ರಹಾಸ ರೈ ಬಿ, ಮುಂಡೂರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ, ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಅಕ್ಷಯ ಪಾರ್ಮ್ಸ್ ಮಾಲಕ ಜಯಂತ ನಡುಬೈಲು, ಎಂಆರ್‌ಪಿಎಲ್ ಮಂಗಳೂರು ಇದರ ಸೀನಿಯರ್ ಇಂಜಿನಿಯರ್ ಸೀತರಾಮ ರೈ ಕೈಕಾರ, ಪುಣೆ ತುಳು ಒಕ್ಕೂಟದ ಅಧ್ಯಕ್ಷ ತಾರನಾಥ ರೈ ಮೇಗಿನಗುತ್ತು, ಕುಂಬ್ರ ಕೆ.ಐ.ಸಿಯ ಮ್ಯಾನೇಜಿಂಗ್ ಡೈರೆಕ್ಟರ್ ಕೆ.ಆರ್ ಹುಸೈನ್ ದಾರಿಮಿ ರೆಂಜಲಾಡಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ದೋಹಾ ಕತಾರ್ ಎ.ಟಿ.ಎಸ್ ಸಮೂಹ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ರವಿ ಶೆಟ್ಟಿ ಮೂಡಂಬೈಲು ನೇಸರಕಂಪ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸಂಜೆ ಗಂಟೆ 6 ರಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದೆರ್ ಮಂಜೇಶ್ವರ ಅಭಿನಯಿಸುವ ’ಕೈಪತ್ತಿನಾರ್’ ತುಳು ನಾಟಕ ಪ್ರದರ್ಶನ ನಡೆಯಲಿದೆ. ಕಾರ್ಯುಕ್ರಮದಲ್ಲಿ ಭಾಗವಹಿಸುವವರಿಗೆ ಭೋಜನದ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಎಸ್‌ಡಿಎಂಸಿ ಕಾರ್ಯಾಧ್ಯಕ್ಷ, ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು, ಪ್ರಧಾನ ಕಾರ್ಯದರ್ಶಿ ರತ್ನಾಕರ ರೈ ತಿಂಗಳಾಡಿ, ಶಾಲಾ ಮುಖ್ಯಗುರು ಜಯರಾಮ ಶೆಟ್ಟಿ ಕೆ ತಿಳಿಸಿದ್ದಾರೆ.

5.5 ಲಕ್ಷ ರೂ ಅಂದಾಜು  ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ರಂಗ ಮಂದಿರದ ಉದ್ಘಾಟನೆ ನಡೆಯಲಿದೆ. ಬೆಳ್ಳಿಹಬ್ಬ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಗೆ, ಗ್ರಾಮಸ್ಥರಿಗೆ ಮತ್ತು ಶಾಲಾ ಮಕ್ಕಳಿಗೆ ಏರ್ಪಡಿಸಲಾಗಿದ್ದ ಕ್ರೀಡಾ ಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.