ಡಿ.18 ರಂದು ಪರಿಯಲ್ತಡ್ಕ ಶಾಲೆಯಲ್ಲಿ  ಬಂಟ್ವಾಳ ತಾಲೂಕು ಯುವಜನ ಮೇಳ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ದ.ಕ ಜಿಲ್ಲಾ ಪಂಚಾಯತ್, ತಾ.ಪಂ ಬಂಟ್ವಾಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬಂಟ್ವಾಳ, ಗ್ರಾ.ಪಂ ಪುಣಚ, ಯುವಜನ ಒಕ್ಕೂಟ ಬಂಟ್ವಾಳ ಹಾಗು ಯುವಕ ಮಂಡಲ ಪುಣಚ ಇದರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಯುವಜನ ಮೇಳ  ಡಿ.18ರಂದು ಪುಣಚ ಪರಿಯಲ್ತಡ್ಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಲಿದೆ.

ಸಚಿವ ಬಿ ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದೀಯ ಕಾರ್ಯದರ್ಶಿ, ಶಾಸಕಿ ಶಕುಂತಳಾ ಟಿ ಶೆಟ್ಟಿ ಅಧ್ಯಕ್ಷತೆವಹಿಸಲಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಹಾಗು ಗ್ರಾಹಕರ ವ್ಯವಹಾರಗಳ ಸಚಿವ ಯು.ಟಿ ಖಾದರ್ ಹಾಗೂ ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಬಂಟ್ವಾಳ ತಾ.ಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಬಂಟ್ವಾಳ ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ತಾಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ ಬಂಗೇರ, ಪುಣಚ ಕ್ಷೇತ್ರ ಜಿ.ಪಂ ಸದಸ್ಯೆ ಜಯಶ್ರೀ ಕೋಡಂದೂರು, ಕೊಳ್ನಾಡು ಕ್ಷೇತ್ರ ಜಿಪಂ ಸದಸ್ಯ ಎಂ.ಎಸ್ ಮೊಹಮ್ಮದ್, ಪುಣಚ ಕ್ಷೇತ್ರ ತಾಪಂ ಸದಸ್ಯೆ ಕವಿತಾ ಎಸ್ ನಾಕ್, ಪುಣಚ ಗ್ರಾಪಂ ಅಧ್ಯಕ್ಷೆ ಪ್ರತಿಭಾ ಶ್ರೀಧರ್ ಶೆಟ್ಟಿ, ಉಪಾಧ್ಯಕ್ಷರು ಮಹೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.