ದ.20: ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಮುಷ್ಕರ

ಪುತ್ತೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದ.20 ರಂದು ಮುಷ್ಕರ ನಡೆಸಲು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ನಿರ್ಧರಿಸಿದೆ. ವೇತನ ಹೆಚ್ಚಳ ಮಾಡಬೇಕು ಮತ್ತು ವಿವಿಧ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ದ.20 ರಂದು ಜಿಲ್ಲೆಯಾದ್ಯಂತ ಮುಷ್ಕರ ನಡೆಯಲಿರುವುದರಿಂದ ಅಂದು ಪುತ್ತೂರು ತಾಲೂಕಿನ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಬೆಳಿಗ್ಗೆ ಮಂಗಳೂರು ಕರಾವಳಿ ಉತ್ಸವದ ಮೈದಾನದಲ್ಲಿ ಸೇರಿ ಅಲ್ಲಿಂದ ಜಾಥಾದ ಮೂಲಕ ಉಪನಿರ್ದೇಶಕರ ಕಚೇರಿಯ ಮುಂದೆ ಮುಷಕರ ನಡೆಸುವುದು ಎಂದು ಪುತ್ತೂರು ತಾಲೂಕು ಸಂಘ ತೀರ್ಮಾನಿಸಿದೆ. ನೆಲ್ಲಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ತಾಲೂಕು ಸಂಘದ ಅಧ್ಯಕ್ಷೆ ಮೀನಾಕ್ಷಿ ಶಾಂತಿನಗರರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಜಿಲ್ಲಾ ಸಂಘದ ಅಧ್ಯಕ್ಷೆ ವಿಶಾಲಾಕ್ಷಿ ಮಂಗಳೂರು, ತಾಲೂಕು ಸಲಹೆಗಾರರಾದ ಸಂಧ್ಯಾ ಕಸಬ ಮತ್ತು ವಲಯದ ಅಧ್ಯಕ್ಷರೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯದರ್ಶಿ ಜಯಲತಾ ಸ್ವಾಗತಿಸಿ, ಖಜಾಂಜಿ ಪುಷ್ಪಾವತಿ ಕೊಳ್ತಿಗೆ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.