ದ 18: ಕಾಣಿಯೂರಿನಲ್ಲಿ 5ನೇ ವರ್ಷದ ಮುಕ್ತ ಕೆಸರುಗದ್ದೆ ಕ್ರೀಡಾಕೂಟ- ಸನ್ಮಾನ ಸಮಾರಂಭ

Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲ ಕಾಣಿಯೂರು ಇದರ ಆಶ್ರಯದಲ್ಲಿ 5ನೇ ವರ್ಷದ ಮುಕ್ತ ಕೆಸರುಗದ್ದೆ ಕ್ರೀಡಾಕೂಟ – 2016 ಮತ್ತು ಸನ್ಮಾನ ಸಮಾರಂಭವು ದ 18ರಂದು ಕಾಣಿಯೂರು ಅಮ್ಮನವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಲಿದೆ. ಕ್ರೀಡಾಕೂಟವನ್ನು ಹಿರಿಯ ಪ್ರಗತಿಪರ ಕೃಷಿಕ ಬೀರಣ್ಣ ಗೌಡ ಕಟ್ಟತ್ತಾರುರವರು ಉದ್ಘಾಟಿಸಲಿದ್ದಾರೆ.

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಅಧ್ಯಕ್ಷ ದಿನೇಶ್ ಮುಗರಂಜ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ ಚಾರ್ವಾಕ ಕ್ಷೇತ್ರದ ತಾ.ಪಂ ಸದಸ್ಯೆ ಲಲಿತಾ ಈಶ್ವರ, ಕೇರ್ಪಡ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವಸಂತ ನಡುಬೈಲುರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಾಣಿಯೂರು ಗ್ರಾ.ಪಂ ಸದಸ್ಯರುಗಳಾದ ರಾಮಣ್ಣ ಗೌಡ ಮುಗರಂಜ, ಸುರೇಶ್ ಓಡಬಾಯಿ, ಲಲಿತಾ ತೋಟ, ಕಣ್ವರ್ಷಿ ಮಹಿಳಾ ಮಂಡಲದ ಅಧ್ಯಕ್ಷೆ ಮಮತಾ ಲೋಕೇಶ್ ಅಗಳಿಯವರು ಗೌರವ ಉಪಸ್ಥಿತಿಗಳಾಗಿ ಭಾಗವಹಿಸಲಿದ್ದಾರೆ.

ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಪುತ್ತೂರು ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಅಧ್ಯಕ್ಷತೆ ವಹಿಸಲಿದ್ದು, ಬೆಳ್ಳಾರೆ ಪೋಲೀಸ್ ಠಾಣೆಯ ಠಾಣಾಧಿಕಾರಿ ಎಂ.ವಿ ಚೆಲುವಯ್ಯ, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಶಿವರಾಮ ಯೇನೆಕಲ್ಲುರವರು

ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ನಿವೃತ್ತ ಸೈನಿಕರುಗಳಾದ ಸೀತಾರಾಮ ಖಂಡಿಗ, ಸುಕುಮಾರ್ ಅಜಿರಂಗಳ, ನಿವೃತ್ತ ಮುಖ್ಯಗುರು ಯಮುನಾ ಕೆ ಗುಂಡಿಗದ್ದೆ, ನಿವೃತ್ತ ದೈಹಿಕ ಶಿಕ್ಷಕ ಚಂದ್ರಶೇಖರ ಎನ್‌ಎಸ್‌ಡಿ, ಬಜತ್ತೂರು ಕ್ಲಸ್ಟರ್ ಸಿಆರ್‌ಪಿ ಗಣೇಶ್ ನಡುವಾಲ್ ಇವರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಸಾರ್ವಜನಿಕ ಪುರುಷರಿಗೆ, ಮಹಿಳೆಯರಿಗೆ ಮತ್ತು ಬಾಲಕ-ಬಾಲಕಿಯರಿಗೆ ಮುಕ್ತ ಕೆಸರುಗದ್ದೆ ಓಟ ನಡೆಯಲಿದ್ದು, ಪುರುಷರಿಗೆ ನಡೆಯುವ ಮುಕ್ತ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ರೂ ೧೦,೦೧೬/- ನಗದು  ಮತ್ತು ಶಾಶ್ವತ ಫಲಕ, ದ್ವಿತೀಯ ಬಹುಮಾನ ರೂ ೭೦೧೬/- ನಗದು ಮತ್ತು ಶಾಶ್ವತ ಫಲಕ ಹಾಗೂ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ರೂ ೪೦೧೬/- ನಗದು ಮತ್ತು ಶಾಶ್ವತ ಫಲಕ ದ್ವಿತೀಯ ರೂ ೨೫೧೬/-ನಗದು ಮತ್ತು ಸಾಶ್ವತ ಫಲಕ ಹಾಗೂ ಸೆಮಿಫೈನಲ್‌ನಲ್ಲಿ ನಿರ್ಗಮಿತ ತಂಡಗಳಿಗೆ ಮತ್ತು ಶಿಸ್ತುಬದ್ಧ ತಂಡಗಳಿಗೆ ಶಾಶ್ವತ ಫಲಕವನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ೯೪೮೦೨೦೦೦೨೫, ೯೪೮೧೧೦೩೪೦೭, ೯೬೬೩೫೯೨೩೨೩ ಸಂಪರ್ಕಿಸುವಂತೆ ಯುವಕ ಮಂಡಲದ ಪದಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.