ಪಾಣಾಜೆ : ಸುಬೋಧ ಪ್ರೌಢ ಶಾಲಾ ವಾರ್ಷಿಕೋತ್ಸವ ನಮ್ಮ ಭವಿಷ್ಯ ನಮ್ಮ ಕೈಯಲ್ಲಿದೆ -ಅನ್ನಪೂರ್ಣ ಶರ್ಮ

Puttur_Advt_NewsUnder_1
Puttur_Advt_NewsUnder_1

 

panaje-subodhaಪಾಣಾಜೆ : ನಮ್ಮ ಭವಿಷ್ಯ ನಮ್ಮ ಕೈಯಲ್ಲಿದೆ. ಅದನ್ನು ಸರಿಯಾಗಿ ರೂಪಿಸುವ ಮೂಲಕ ನಮ್ಮ ಜೀವನವನ್ನು ಸಾರ್ಥಕಗೊಳಿಸಬೇಕು ಎಂದು ಶರ್ಮಾಸ್ ಕಮ್ಯೂನಿಕೇಶನ್ಸ್‌ನ ಅನ್ನಪೂರ್ಣ ಶರ್ಮ ಹೇಳಿದರು. ಪಾಣಾಜೆ ಸುಬೋಧ ಪ್ರೌಢ ಶಾಲೆಯ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಧ್ವಜ ವಂದನೆಯ ಮೂಲಕ ಕಾರ್ಯಕ್ರಮ ಪ್ರಾರಂಭಗೊಂಡಿತು. ಸಭಾಕಾರ್ಯಕ್ರದ ಅಧ್ಯಕ್ಷತೆಯನ್ನು ಪಿ.ಎಚ್.ಡಿ ಸಂಶೋಧನಾ ವಿದ್ಯಾರ್ಥಿ ರವಿಶಂಕರ ಜಿ.ಕೆ ವಹಿಸಿ ಮಾತನಾಡಿ ’ಇಂದು  ಆಂಗ್ಲಮಾಧ್ಯಮ ಶಾಲೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿರುವುದು ಕಾಣಬರುತ್ತಿದೆ ಆದರೆ ಅದು ತಪ್ಪು ಭಾವನೆ. ಮಾಧ್ಯಮ ಕೇವಲ ವ್ಯವಹಾರಿಕತೆಗೆ ಮಾತ್ರವಾಗಿದೆ ಹೊರತು ವಿಚಾರಕ್ಕೆ ಅಲ್ಲ ಆದ್ದುದರಿಂದ ಕನ್ನಡ ಮಾಧ್ಯಮದ ಬಗ್ಗೆ ಕೀಳರಿಮೆ ಬೇಡ ಎಷ್ಟೋ ಪ್ರತಿಭಾನ್ವಿತ ವಿದ್ಯಾರ್ಥಿಗಳು ಕನ್ನಡ  ಮಾಧ್ಯಮದಲ್ಲೇ ವ್ಯಾಸಂಗಮಾಡಿ ಸಾಧನೆ ಮಾಡಿದ್ದಾರೆ’ ಎಂದು ಹೇಳಿ ಕನ್ನಡವನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರಲ್ಲಿದೆ ಎಂದರು. ಜೇಸಿ ಅಂತರಾಷ್ಟ್ರೀಯ ತರಬೇತುದಾರ ಕೃಷ್ಣಮೋಹನ್ ಪಿ.ಎಸ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಹಾಜಿ ಅಬೂಬಕ್ಕರ್ ಆರ್ಲಪದವು ಸಂದರ್ಭೋಚಿತವಾಗಿ ಮಾತನಾಡಿದರು. ವೇದಿಕೆಯಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಈಶ್ವರ ಭಟ್ ಕಡಂದೇಲು ಉಪಸ್ಥಿತರಿದ್ದರು. ಶಾಲಾ ಸಂಚಾಲಕರಾದ ಮಹಾಬಲೇಶ್ವರ ಭಟ್ ಗಿಳಿಯಾಲು ಪ್ರಾಸ್ತವಿಕದೊಂದಿಗೆ ಸ್ವಾಗತಿಸಿ, ಶಾಲಾ ಮುಖ್ಯಗುರು ನಾರಾಯಣ ಎಸ್. ಕೆ. ವಂದಿಸಿದರು.

ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ವಿವಿಧ ಸ್ಪರ್ಧಾ ಕಾರ್ಯಕ್ರಮದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿಯರಾದ ನಿರ್ಮಲ ಕೆ ಮತ್ತು ವಿನುತ ಕುಮಾರಿ ಇವರು ನೆರವೇರಿಸಿದರು. ಶಿಕ್ಷಕ ಶ್ರೀಪತಿ ಭಟ್ ಇಂದಾಜೆ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಅಪರಾಹ್ನ ಶಾಲಾ ಮಕ್ಕಳಿಂದ ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಚಿತ್ರಕಲಾ ಪ್ರದರ್ಶನ

ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಚಿತ್ರಕಲಾ ಪ್ರದರ್ಶನ ನಡೆಯಿತು. ಶರ್ಮಾಸ್ ಕಮ್ಯೂನಿಕೇಶನ್ಸ್ ನ ಮಾಲಕ ಪಶುಪತಿ ಶರ್ಮಾ ಉದ್ಘಾಟಿಸಿದರು. ಶಾಲಾ ಮಕ್ಕಳಿಂದ ಬರೆಯಲ್ಪಟ್ಟ ವರ್ಣರಂಜಿತ ಚಿತ್ರಗಳು ಹಾಗೂ ಕಲಾವಿದ ಯೋಗೀಶ್ ಕಡಂದೇಲು ಕೈಚಳಕದಲ್ಲಿ ಮೂಡಿ ಬಂದ ಚಿತ್ರಗಳು ಆಕರ್ಷಿಸಿದವು. ಚಿತ್ರಕಲಾ ಶಿಕ್ಷಕಿ ಶಾರದ ಜಿ. ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.