ಪೆರ್ನೆ: ಅಕ್ರಮ ಮರಳು ಸಾಗಾಟ-ಲಾರಿ ವಶಕ್ಕೆ

Puttur_Advt_NewsUnder_1
Puttur_Advt_NewsUnder_1

perne

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರು ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ, ಲಾರಿಯೊಂದನ್ನು ವಶಕ್ಕೆ ತೆಗೆದುಕೊಂಡು ಕೇಸು ದಾಖಲಿಸಿದ್ದಾರೆ.

 ಬಿಳಿಯೂರು ಎಂಬಲ್ಲಿ ಪೆರ್ನೆಯ ಹನೀಫ್ ಎಂಬವರು ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಬಗ್ಗೆ ಸಾರ್ವಜನಿಕರು ನೀಡಿರುವ ದೂರಿನ ಮೇರೆಗೆ ಉಪ್ಪಿನಂಗಡಿ ಎಸ್.ಐ. ರತನ್ ಮತ್ತು ಸಿಬ್ಬಂದಿಗಳು ಹಠಾತ್ ಧಾಳಿ ನಡೆಸಿ ಲಾರಿಯನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ.

 ಲಾರಿ ನಂಬ್ರ ನಕಲಿ?:  ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದ ಲಾರಿಯ ಮುಂಭಾಗದಲ್ಲಿ ನಂಬ್ರ ಅಳವಡಿಸದೆ ಇದ್ದು, ಹಿಂದುಗಡೆ ಇರುವ ನಂಬ್ರ ಅಕ್ಷರಗಳನ್ನು ಅಳಿಸಿ ಹಾಕಲಾಗಿದ್ದು, ಅದಾಗ್ಯೂ ಲಾರಿಯ ದಾಖಲೆ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಇದರಲ್ಲಿ ದಾಖಲೆಗಳು ನಕಲಿ ಎಂದು ಹೇಳಲಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ  ಸಾರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.