ದ.22: ಉದನೆ ಸೈಂಟ್ ಆಂಟನೀಸ್ ಪ್ರೌಢಶಾಲೆ, ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ, ಪೂರ್ವವಿದ್ಯಾರ್ಥಿಗಳ ಸ್ನೇಹಸಮ್ಮಿಲನ

Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಉದನೆ ಸೈಂಟ್ ಆಂಟನೀಸ್ ಪ್ರೌಢಶಾಲೆ ಹಾಗೂ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನ ವಾರ್ಷಿಕೋತ್ಸವ, ಪೂರ್ವವಿದ್ಯಾರ್ಥಿಗಳ ಸ್ನೇಹಸಮ್ಮಿಲನ ಕಾರ‍್ಯಕ್ರಮ ದ.22ರಂದು ಸೈಂಟ್ ಆಂಟನೀಸ್ ಹೈಸ್ಕೂಲ್‌ನಲ್ಲಿ ನಡೆಯಲಿದೆ.

ಪೂರ್ವವಿದ್ಯಾರ್ಥಿಗಳ ಸ್ನೇಹಸಮ್ಮಿಲನ: ಬೆಳಿಗ್ಗೆ ಪೂರ್ವವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ‍್ಯಕ್ರಮ ನಡೆಯಲಿದೆ. ಹೊನ್ನಾವರ ಸೈಂಟ್ ಆಂಟನೀಸ್ ಎಜ್ಯುಕೇಶನ್ ಸೊಸೈಟಿಯ ನಿರ್ದೇಶಕ ಬಿಷಪ್ ಯಾಕೂಬ್ ಮಾರ್ ಅಂತೋನಿಯೋಸ್‌ರವರು ಉದ್ಘಾಟಿಸಲಿದ್ದಾರೆ. ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಗಳ ಸಂಚಾಲಕ ರೆ.ಫಾ.ಹನಿಜೇಕಬ್, ಉದನೆ ಸೈಂಟ್ ಆಂಟನೀಸ್ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು ಚಾಕೋವರ್ಗೀಸ್ ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾರ‍್ಯಕ್ರಮದಲ್ಲಿ ಗರಿಷ್ಠ ಅಂಕಗಳಿಸಿದ ಪೂರ್ವವಿದ್ಯಾರ್ಥಿಗಳಿಗೆ ಗೌರವಾರ್ಪಣೆ, ಪೂರ್ವವಿದ್ಯಾರ್ಥಿಗಳ ಸಂಗಮ, ಸಮ್ಮಿಲನ, ಸಂವಾದ ಕಾರ‍್ಯಕ್ರಮ ನಡೆಯಲಿದೆ ಎಂದು ಪೂರ್ವವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ರೆ.ಫಾ.ಜೋಸ್ ವಲಿಯ ಪರಂಬಿಲ್, ಅಧ್ಯಕ್ಷ ಜಿಮ್ಸನ್ ಕೆ.ಜಿ., ಕಾರ್ಯದರ್ಶಿ ವಿಶ್ವನಾಥ ಹೂವಿನಮಜಲು ತಿಳಿಸಿದ್ದಾರೆ.

ಶಾಲಾ ವಾರ್ಷಿಕೋತ್ಸವ: ಸಂಜೆ ನಡೆಯಲಿರುವ ಶಾಲಾ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮವನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕುಝಿ ಉದ್ಘಾಟಿಸಲಿದ್ದಾರೆ. ಹೊನ್ನಾವರ ಸೈಂಟ್ ಆಂಟನೀಸ್ ಎಜ್ಯುಕೇಶನ್ ಸೊಸೈಟಿ ನಿರ್ದೇಶಕ ಬಿಷಪ್ ಯಾಕೂಬ್ ಮಾರ್ ಅಂತೋನಿಯೋಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು-ಬಲ್ಮಠ ಸರಕಾರಿ ಜೂನಿಯರ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪಿ.ಪಿ.ಜೋಸೆಫ್ ಶೈಕ್ಷಣಿಕ ಉಪನ್ಯಾಸ ನೀಡಲಿದ್ದಾರೆ. ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್, ಬಿಳಿನೆಲೆ ಕ್ಷೇತ್ರದ ತಾ.ಪಂ.ಸದಸ್ಯೆ ಆಶಾ ಲಕ್ಷ್ಮಣ, ಶಿರಾಡಿ ಗ್ರಾ.ಪಂ.ಅಧ್ಯಕ್ಷ ತಿಮ್ಮಯ್ಯ ಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಜಿ.ಎಸ್., ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಬಾಲಕೃಷ್ಣ ಬಳ್ಳೇರಿ, ನೆಲ್ಯಾಡಿ ಸಮೂಹ ಸಂಪನ್ಮೂಲ ವ್ಯಕ್ತಿ ಅಶೋಕ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಾರ್ಷಿಕೋತ್ಸವದ ಅಂಗವಾಗಿ ಮಧ್ಯಾಹ್ನ ಪುಟಾಣಿ ಮಕ್ಕಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ. ಸಂಜೆ ಸಭಾ ಕಾರ‍್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಹಾಗೂ ಪೂರ್ವವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ  ಎಂದು ಸಂಸ್ಥೆಯ ಸಂಚಾಲಕ ರೆ.ಫಾ.ಹನಿ ಜೇಕಬ್, ಮುಖ್ಯೋಪಾಧ್ಯಾಯ ಸೆಬಾಸ್ಟಿನ್ ಕೆ.ಎಸ್., ಮುಖ್ಯೋಪಾಧ್ಯಾಯನಿ ಎಲಿಝಬೆತ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರುಗಳಾದ ವಿಶ್ವನಾಥ ಪೂಜಾರಿ, ಮಹೇಂದ್ರನ್ ಪಿಳ್ಳೈ, ವಿದ್ಯಾರ್ಥಿ ನಾಯಕರುಗಳಾದ ಪ್ರಸನ್ನಕುಮಾರ್, ವಿನುತಾ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.