ದ.21-22ಸುದಾನ ಶಾಲಾ ವಾರ್ಷಿಕೋತ್ಸವ ’ಕನಸುಗಳು’

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪ್ರತಿ ವರ್ಷ ವಿಶಿಷ್ಟ, ವಿಭಿನ್ನ ಶೈಲಿಯಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಆಚರಿಸಿಕೊಂಡು ಬರುತ್ತಿರುವ ನೆಹರು ನಗರದ ಸುದಾನ ವಸತಿಯುತ ಶಾಲಾ ವಾರ್ಷಿಕೋತ್ಸವವು ಈ ಭಾರಿ ’ಕನಸುಗಳು’ ಎಂಬ ಶಿರೋನಾಮೆಯಡಿ ದ.21 ಹಾಗೂ ದ.22ರಂದು ಎರಡು ದಿನಗಳ ಕಾಲ ನಡೆಯಲಿದೆ.

ಪಠ್ಯ ವಿಷಯಗಳ ಜೊತೆಗೆ ವಿದ್ಯಾರ್ಥಿಗಳನ್ನು ಸರ್ವ ರೀತಿಯಲ್ಲಿ ಬೆಳೆಸುತ್ತಿರುವ ವಿದ್ಯಾ ಸಂಸ್ಥೆಯು ಈ ಭಾರಿ ವಿದ್ಯಾರ್ಥಿಗಳಿಗೆ ಅವರವರ ಪ್ರತಿಭೆಗಳಿಗೆ ಪೂರಕವಾದ ಕನಸುಗಳನ್ನು ಸಾಕಾರಗೊಳಿಸಲು ಮುಂದಾಗಿದೆ. ವಿಜ್ಞಾನ, ತಂತ್ರಜ್ಞಾನ, ಕಲೆ, ಸಾಹಿತ್ಯ, ಕ್ರೀಡೆ ಸೇರಿದಂತೆ ಎಲ್ಲಾ ರೀತಿಯಲ್ಲಿಯೂ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳಿಗೆ ಪೂರಕವಾದ ಅವರ ಕನಸುಗಳನ್ನು ನೆರವೇರಿಸಲು ಸಹಕಾರಿಯಾಗಲಿದೆ. ದ.21ರಂದು ನಡೆಯುವ ಕಾರ್ಯಕ್ರಮದಲ್ಲಿ ಸುರತ್ಕಲ್ ಎನ್‌ಐಟಿಕೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಡಿ.ಕೆ ಗೌತಮ್ ಅಧ್ಯಕ್ಷತೆ ವಹಿಸಲಿದ್ದಾರೆ. ಬದಿಯಡ್ಕ ಚಿನ್ಮಯ ವಿದ್ಯಾಲಯ ವಿದ್ಯಾರ್ಥಿ ಸನ್ನಿಧಿ.ಟಿ ರೈ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ದ.22ರಂದು ನಡೆಯುವ ಕಾರ್ಯಕ್ರಮದಲ್ಲಿ ಸಂಸ್ಥೆಯ ಹಿರಿಯ ವಿದ್ಯಾರ್ಥಿ, ಬ್ಯುಸಿನೆಸ್ ಕನ್ಸಲ್ಟೆಂಟ್ ಹರ್ಷಿತ್ ಎಂ.ಬಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ಆಯನ ವಿ ಪೆರ್ಲ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು, ವಿಶಾಖಪಟ್ಟಣದಲ್ಲಿ ಭೂಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಂಜಿತ್ ಆರ್ ಹಾಗೂ ಸಿಯಾಚಿನ್ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಧೇಶ್‌ರವರು ಗೌರವ ಅಥಿತಿಗಳಾಗಿ ಆಗಮಿಸಲಿದ್ದಾರೆ. ವಾರ್ಷಿಕೋತ್ಸವದ ಎರಡೂ ದಿನಗಳಲ್ಲಿಯೂ ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.