Breaking News

ಉಪ್ಪಿನಂಗಡಿ: ಉಚಿತ ಬೈಸಿಕಲ್ ವಿತರಣೆ

Puttur_Advt_NewsUnder_1
Puttur_Advt_NewsUnder_1

img_6972_2

ಪುತ್ತೂರು: ಶಿಕ್ಷಣದಿಂದ ಯಾರೂ ವಂಚಿತರಾಗದಿರಲೆಂದು ಸರಕಾರವು ಹಲವು ಸೌಲಭ್ಯಗಳನ್ನು ಪ್ರಾಥಮಿಕ ಮತ್ತು ಪೌಢಶಿಕ್ಷಣದಲ್ಲಿ ನೀಡುತ್ತಿದೆ. ಬೈಸಿಕಲ್‌ನ ಬಳಕೆಯಿಂದ ವಿದ್ಯಾರ್ಥಿಗಳಿಗೆ ಉತ್ತಮ ವ್ಯಾಯಾಮ ಮತ್ತು ಸಮಯದ ಉಳಿತಾಯವಾಗುತ್ತದೆಯೆಂದು ಜಿ.ಪಂ ಸದಸ್ಯೆ ಶಯನ ಜಯಾನಂದ ಹೇಳಿದರು. ಉಪ್ಪಿನಂಗಡಿ ಸರಕಾರಿ ಪದವಿಪೂರ್ವ ಕಾಲೇಜಿನ ೮ನೇ ತರಗತಿಯ ೯೧ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಹಿಮಾನ್ ಮಾತನಾಡಿ ಬೈಸಿಕಲ್‌ನ ಸದುಪಯೋಗ ಮಾಡಿ ಉತ್ತಮ ಶೈಕ್ಷಣಿಕ ಸಾಧನೆ ಮಾಡುವಂತೆ ಕರೆನೀಡಿದರು.

ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಎ.ರಘುನಾಥ ರೈ, ರೊ| ಅಜೀಜ್ ಬಸ್ತಿಕಾರ್, ಶಿಕ್ಷಣತಜ್ಞ ಎಂ.ಕೆ ಸಾಲಿಯಾನ್, ಗ್ರಾಮ ಪಂಚಾಯತ್ ಸದಸ್ಯ ಮಹಮ್ಮದ್ ತೌಸಿಫ್ ಯು.ಟಿ  ಶುಭಹಾರೈಸಿದರು. ಉಪಪ್ರಾಂಶುಪಾಲ ದಿವಾಕರ ಆಚಾರ್ಯ ಉಪಸ್ಥಿತರಿದ್ದರು. ಶಿಕ್ಷಕರಾದ ಲಕ್ಷ್ಮೀಶ ನಾಯ್ಕ್ ಸ್ವಾಗತಿಸಿ, ಸುಬ್ರಹ್ಮಣ್ಯ ಭಟ್ ವಂದಿಸಿದರು. ವಿಜಯ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.