Breaking News

ಅರ್ಕ ಹಿ.ಪ್ರಾ ಶಾಲಾ ಅಕ್ಷರ ದಾಸೋಹ ಕಟ್ಟಡ ಉದ್ಘಾಟನೆ, ಪ್ರತಿಭಾ ಪುರಸ್ಕಾರ

Puttur_Advt_NewsUnder_1
Puttur_Advt_NewsUnder_1

arka1 arka2ಪುತ್ತೂರು: ಅರ್ಕ ಹಿ.ಪ್ರಾ ಶಾಲೆಯಲ್ಲಿ ಅಕ್ಷರದಾಸೋಹ ಕಟ್ಟಡ ಉದ್ಘಾಟನೆ ಹಾಗು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಡಿ.19ರಂದು ನಡೆಯಿತು.

ಶಾಸಕಿ, ಸಂಸದೀಯ ಕಾರ್ಯದರ್ಶಿ ಶಕುಂತಳಾ ಟಿ ಶೆಟ್ಟಿಯವರು ಅಕ್ಷರ ದಾಸೋಹ ಕಟ್ಟಡವನ್ನು ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕೊಡಿಪಾಡಿ ಗ್ರಾಪಂ ಅಧ್ಯಕ್ಷೆ ಲೀಲಾವತಿ ಕೋಂಟ್ರುಪ್ಪಾಡಿಯವರು ಅಧ್ಯಕ್ಷತೆ ವಹಿಸಿದ್ದರು. ಕೊಡಿಪಾಡಿ ಗ್ರಾಪಂ ಉಪಾಧ್ಯಕ್ಷ ಸುಬ್ರಹ್ಮಣ್ಯ ಗೌಡ ಹನಿಯೂರುರವರು ದೀಪ ಬೆಳಗಿಸಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸದಸ್ಯರಾದ ಗಿರಿಧರ ಗೋಮುಖ, ಸೋಮಪ್ಪ ಪೂಜಾರಿ ಓಜಾಲ, ಅಕ್ಷರದಾಸೋಹದ ಸಹಾಯಕ ನಿರ್ದೇಶಕ ಸುರೇಶ್ ಕುಮಾರ್ ಪಿ, ಶಿಕ್ಷಣ ಸಂಯೋಜಕ ಲೋಕಾನಂದ, ಕಲ್ಲಂದಡ್ಕ ಜುಮ್ಮಾಮಸೀದಿಯ ಖತೀಬ ಸೈಫುಲ್ಲಾ ಸಹದಿ,  ಶಾಲಾ ಮುಖ್ಯ ಶಿಕ್ಷಕಿ ಬಿ. ಧನಲಕ್ಷ್ಮಿ, ಎಸ್‌ಡಿಎಂಸಿ ಅಧ್ಯಕ್ಷ ಇಬ್ರಾಹಿಂ ಕೆ, ಉಪಾಧ್ಯಕ್ಷೆ ಪ್ರಮೀಳ, ಅರ್ಕ ಶ್ರೀ ಮಹಾದೇವಿ ಭಜನಾ ಮಂದಿರದ ಅಧ್ಯಕ್ಷ ಶ್ರೀಧರ ಅರ್ಕ, ದುರ್ಗಾ ಯುವಕ ಮಂಡಲದ ಅಧ್ಯಕ್ಷ ಕೇಶವ ಪೆಲತ್ತಡಿ ಉಪಸ್ಥಿತರಿದ್ದರು. ಆಟೋಟ ಸ್ಪರ್ದೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ತುಳಸಿ ಹಾಗು ತಂಡದವರು ಪ್ರಾರ್ಥಿಸಿ, ಶಿಕ್ಷಕಿ ಧನಲಕ್ಷ್ಮಿ ಸ್ವಾಗತಿಸಿದರು, ಶಿಕ್ಷಕಿ ಸತ್ಯಭಾಮ ಬಹುಮಾನ ವಿಜೇತರ ಪಟ್ಟಿಯನ್ನು ಓದಿದರು, ಶಿಕ್ಷಕಿ ಸುರೇಖ ವಂದಿಸಿದರು. ಶಿಕ್ಷಕಿ ಚಿತ್ರಕಲಾ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಅಂಗನವಾಡಿ ಹಾಗು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.