ಸವಣೂರು ವಿದ್ಯಾರಶ್ಮಿಯಲ್ಲಿ ದ.23-ಪ್ರತಿಭಾ ದಿನಾಚರಣೆ, ದ.24-ವಾರ್ಷಿಕೋತ್ಸವ

Puttur_Advt_NewsUnder_1
Puttur_Advt_NewsUnder_1

vidyarashmiಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಭವನದಲ್ಲಿ ದ.23 ರಂದು ಪ್ರತಿಭಾ ದಿನಾಚರಣೆ ಮತ್ತು ದ.24ರಂದು ಸಂಜೆ ವಾರ್ಷಿಕೋತ್ಸವ ಸಮಾರಂಭ ಜರಗಲಿದೆ. ದ.23ರಂದು ನಡೆಯುವ ಪ್ರತಿಭಾ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ವಹಿಸಲಿದ್ದಾರೆ. ಸುಳ್ಯ ಎನ್‌ಎಂಸಿಯ ಕನ್ನಡ ಉಪನ್ಯಾಸಕಿ ಡಾ| ಅನುರಾಧಾ ಕುರುಂಜಿರವರು ಬಹುಮಾನ ವಿತರಣೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಎಸ್‌ಎನ್‌ಆರ್ ರೂರಲ್ ಎಜುಕೇಶನಲ್ ಟ್ರಸ್ಟ್‌ನ ಟ್ರಸ್ಟಿ ಎನ್.ಸುಂದರ್ ರೈ ಸವಣೂರು ಭಾಗವಹಿಸಲಿದ್ದಾರೆ. ದ.24ರಂದು ಜರಗಲಿರುವ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಂಗಳೂರು ಯೇನಪೋಯ ಯುನಿವರ್ಸಿಟಿಯ ರಿಜಿಸ್ಟ್ರಾರ್ ಜಿ.ಶ್ರೀಕುಮಾರ್ ಮೆನನ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಎಸ್ಪಿ ಭೂಷಣ್ ಜಿ. ಬೊರಸೆ ಸನ್ಮಾನ ನೆರವೇರಿಸಲಿದ್ದಾರೆ. ಮಂಗಳೂರಿನ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಕೆ.ಸಿ.ನಾಕ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು  ಎಸ್‌ಎನ್‌ಆರ್ ರೂರಲ್ ಎಜುಕೇಶನ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಮತ್ತು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ, ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ ಮತ್ತು ಪ್ರಾಂಶುಪಾಲ ಸೀತಾರಾಮ ಕೇವಳರವರು ತಿಳಿಸಿದ್ದಾರೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.