ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿ.23ಕ್ಕೆ ಬಿಜೆಪಿಯಿಂದ ಎ.ಸಿಯವರ ಮೂಲಕ ಸರಕಾರಕ್ಕೆ ಮನವಿ

 

ಪುತ್ತೂರು: ದ.ಕ ಜಿಲ್ಲೆಯಲ್ಲಿ ಕೊಳವೆ ಬಾವಿ ಕೊರೆಯಲು ಅನುಮತಿ ನೀಡಬೇಕು, 94ಸಿ, 94ಸಿಸಿಯಲ್ಲಿನ ಗೊಂದಲ ಸರಿಪಡಿಸಿ ಶೀಘ್ರದಲ್ಲಿ ಅರ್ಜಿಗಳ ವಿಲೇವಾರಿ ಮಾಡಬೇಕು, ಪ.ಜಾತಿ, ಪ.ಪಂಗಡದಾರರಿಗೆ ಹಾಗೂ ಬಿಪಿಎಲ್ ಕುಟುಂಬಗಳಿಗೆ 94ಸಿಯಡಿಯಲ್ಲಿ ಸಲ್ಲಿಸುವ ಅರ್ಜಿಗೆ ವಿಧಿಶುವ ಶುಲ್ಕದಲ್ಲಿ ವಿನಾಯಿತಿ ನೀಡಬೇಕು, ಹಾಗೂ ನಗರಸಭಾ ವ್ಯಾಪ್ತಿಯ ಪ್ರತಿ ವಾರ್ಡ್‌ನಲ್ಲಿರುವ ಧಾರ್ಮಿಕ ಸ್ಥಳಗಳಾದ ಭಜನಾ ಮಂದಿರ, ದೈವಸ್ಥಾನಗಳ ಅಡಿ ಸ್ಥಳವನ್ನು ಸರ್ವೆ ಮಾಡಿ ಧಾರ್ಮಿಕ ಕ್ಷೇತ್ರಗಳಿಗೆ ಮಂಜೂರಾತಿ ನೀಡುವಂತೆ ಒತ್ತಾಯಿಸಿ ದ.23ರಂದು ಬೆಳಿಗ್ಗೆ ಬಿಜೆಪಿ ಗ್ರಾಮಾಂತರ ಮತ್ತು ನಗರ ಮಂಡಲದಿಂದ ಪಕ್ಷದ ಕಛೇರಿಯ ಬಳಿಯಿಂದ ಮಿನಿವಿಧಾನ ಸೌಧದವರೆಗೆ ಮೆರವಣಿಗೆ ನಡೆಸಿ ಬಳಿಕ ಸಹಾಯಕ ಆಯುಕ್ತರ ಮೂಲಕ ಸರಕಾರಕ್ಕೆ ಮನವಿ ನೀಡಲಾಗುವುದು, ಹಾಗಾಗಿ ಪಕ್ಷದ ಕಾರ್ಯಕರ್ತರು, ದೇವಸ್ಥಾನ, ಭಜನಾ ಮಂಡಳಿಗಳ ಸದಸ್ಯರು, ರೈತಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಹಾಗೂ ನಗರ ಮಂಡಲದ ಅಧ್ಯಕ್ಷ ಜೀವಂಧರ್ ಜೈನ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.