Breaking News

ಪ್ರಿಯದರ್ಶಿನಿ ಶಾಲಾ ವಾರ್ಷಿಕ ಕ್ರೀಡಾಕೂಟ

Puttur_Advt_NewsUnder_1
Puttur_Advt_NewsUnder_1

priyadarshiniಪುತ್ತೂರು: ಬೆಟ್ಟಂಪಾಡಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ದ. 17ರಂದು ಬೆಟ್ಟಂಪಾಡಿ ನವೋದಯ ಕ್ರೀಡಾಂಗಣದಲ್ಲಿ ನಡೆಯಿತು. ಕಾವೂರು ಬಿಜಿಎಸ್ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೃಷ್ಣಪ್ಪ ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಂಗನಾಥ ರೈ ಗುತ್ತು ಅಧ್ಯಕ್ಷತೆ ವಹಿಸಿದ್ದರು. ನವೋದಯ ಪ್ರೌಢಶಾಲೆಯ ಸಂಚಾಲಕ ಬಾಲಕೃಷ್ಣ ಭಟ್ ಘಾಟೆ ಮುಖ್ಯ ಅತಿಥಿಯಾಗಿ ಶುಭ ಹಾರೈಸಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕ ಶಶಿಕುಮಾರ್ ಬೈಲಾಡಿ, ನವೋದಯ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡ, ಪ್ರಿಯದರ್ಶಿನಿ ಆಡಳಿತ ಮಂಡಳಿ ಸದಸ್ಯ ಡಾ. ಸತೀಶ್ ರಾವ್, ಕರುಣಾಕರ ಶೆಟ್ಟಿ ಕೊಮ್ಮಂಡ, ಪ್ರಕಾಶ್ ರೈ ಬೈಲಾಡಿ ಉಪಸ್ಥಿತರಿದ್ದರು.

ಪ್ರತಿಭಾ ಪುರಸ್ಕಾರ: ಈ ಸಂದರ್ಭದಲ್ಲಿ ಸ್ಥಳೀಯ ಶಾಲೆಗಳ ಕ್ರೀಡಾ ಪ್ರತಿಭೆಗಳನ್ನು ಅಭಿನಂದಿಸಲಾಯಿತು. ರಾಜ್ಯ, ಜಿಲ್ಲಾ ಮಟ್ಟದಲ್ಲಿ ಪದಕಗಳನ್ನು ಪಡೆದ ನವೋದಯ ಪ್ರೌಢಶಾಲೆಯ ದೀಕ್ಷಿತ್ ಚಾಕೋಟೆ, ದೀಕ್ಷಿತ್ ಮಿತ್ತಡ್ಕ, ಹರ್ಷಿತ್, ಅಜಿತ್ ಕುಮಾರ್, ಮಂಜುಶ್ರೀ, ದೀಕ್ಷಾ ಎಂ., ಬೆಟ್ಟಂಪಾಡಿ ಸ.ಹಿ.ಪ್ರಾ.ಶಾಲೆಯ ಅಶ್ವಿನಿ, ಪಟ್ಟೆ ಪ್ರತಿಭಾ ಪ್ರೌಢಶಾಲೆಯ ಅನುಶ್ರೀ, ಪ್ರತೀಕ್ಷಾ, ಉಪ್ಪಳಿಗೆ ಪ್ರೌಢಶಾಲೆಯ ಕಾರ್ತಿಕ್‌ರವರನ್ನು ಅಭಿನಂದಿಸಲಾಯಿತು.

ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಾಲಾ ಮುಖ್ಯಗುರು ರಾಜೇಶ್ ನೆಲ್ಲಿತ್ತಡ್ಕ ಸ್ವಾಗತಿಸಿ, ಸಹಶಿಕ್ಷಕ ಮಿಥುನ್ ವಂದಿಸಿದರು. ಶಿಕ್ಷಕಿಯರಾದ ಶ್ರೀವಿದ್ಯಾ, ಮೀನಾ ಹಾಗೂ ರೂಪಶ್ರೀ ಬಲ್ಲಾಳ್ ಕಾರ್ಯಕ್ರಮ ನಿರೂಪಿಸಿದರು.

ಡಿ.22ರಂದು ವಾರ್ಷಿಕ ಪ್ರತಿಭಾ ಪುರಸ್ಕಾರ

ದ.24: ಶಾಲಾ ವಾರ್ಷಿಕೋತ್ಸವ

ಶಾಲೆಯ ವಾರ್ಷಿಕ ಚಟುವಟಿಕೆಗಳಲ್ಲಿ ಮುಖ್ಯವಾಗಿ ನಡೆಯುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ದ.22 ರಂದು ಹಾಗೂ ಶಾಲಾ ವಾರ್ಷಿಕೋತ್ಸವ ಸಂಭ್ರಮ ದ. 24 ರಂದು ಶಾಲಾ ವಠಾರದಲ್ಲಿ ನಡೆಯಲಿದೆ. ಪ್ರತಿಭಾ ಪುರಸ್ಕಾರದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಗುಣಪಾಲ್ ಜೈನ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಪ್ರಾಥಮಿಕ ವಿಭಾಗದ ಮುಖ್ಯಗುರು ರಾಮ ನಾಯ್ಕ್, ಪ್ರಗತಿಪರ ಕೃಷಿಕ ಬಾಲಚಂದ್ರ ರೈ ಆನಾಜೆ ಭಾಗವಹಿಸಲಿದ್ದಾರೆ. ದ.24 ರಂದು ನಡೆಯಲಿರುವ ಶಾಲಾ ವಾರ್ಷಿಕೋತ್ಸವ ಸಂಭ್ರಮದ ಉದ್ಘಾಟನೆಯನ್ನು ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ನೆರವೇರಿಸಲಿದ್ದಾರೆ. ಪುತ್ತೂರು ಸಿಟಿ ಆಸ್ಪತ್ರೆಯ ಸರ್ಜನ್ ಡಾ. ಗೋಪಿನಾಥ್ ಪೈ, ವಕೀಲ ಮೋಹನ ಗೌಡ ಇಡ್ಯಡ್ಕ, ಎಲ್‌ಐಸಿ ಮಂಗಳೂರಿನ ನಿವೃತ್ತ ಅಧಿಕಾರಿ ಚಂದ್ರಶೇಖರ ರೈ ದೈತೋಟ, ಉದ್ಯಮಿ ಅರುಣ್ ಕುಮಾರ್ ರೈ ಆನಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.  ವಾರ್ಷಿಕೋತ್ಸವ ಸಂಭ್ರಮ ಪ್ರಯುಕ್ತ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬರಲಿವೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.