Breaking News

ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ 6ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ

Puttur_Advt_NewsUnder_1
Puttur_Advt_NewsUnder_1

noojiಕಡಬ: ರೆಂಜಿಲಾಡಿ ಗ್ರಾಮದ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ 6 ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಶ್ರೀ ಉಳ್ಳಾಲ್ತಿ ಅಮ್ಮನವರ ಮೂರ್ತಿ ಪ್ರತಿಷ್ಠೆ ಬ್ರಹ್ಮಕಲಶ ಪೂಜೆ ಹಾಗೂ ಬೆಳ್ಳಿಯ ಮೊಗ ಸಮರ್ಪಣಾ ಕಾರ್ಯಕ್ರಮವು ಡಿ. 21 ಹಾಗೂ 22 ರಂದು ನಡೆಯಲಿದ್ದು ಡಿ.21 ರಂದು ಬೆಳಿಗ್ಗೆ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಗೆ ಹಸಿರು ಹೊರೆಕಾಣಿಕೆ ಸಮರ್ಪಿಸಲಾಯಿತು. ಬೆಳಿಗ್ಗೆ ಕ್ಷೇತ್ರದ ತಂತ್ರಿಗಳ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ಆಚಾರ್ಯವರಣೆ, ಸ್ವಸ್ತಿ ಪುಣ್ಯಾಹವಾಚನ, ಸ್ಥಳ ಶುದ್ದಿ, ಪ್ರಸಾದ ಶುದ್ದಿ, ಮಹಾಸುದರ್ಶನ ಹೋಮ, ಭಾಧಾಕರ್ಷಣೆ ಉಚ್ಚಾಟಣೆ, ವಾಸ್ತು ಹೋಮ, ವಾಸ್ತು ಪೂಜಾ ಬಲಿ, ನೂತನ ಬಿಂಬ ಜಲಾಧಿವಾಸ, ನಡೆದು ಬಳಿಕ ಮಹಾಪೂಜೆಯೊಂದಿಗೆ ಪ್ರಸಾದ ವಿತರಿಸಲಾಯಿತು.

ಡಿ.22: ಡಿ.22 ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಚೋರಶಾಂತಿ ಹೋಮ, ಬಿಂಬಶುದ್ದಿ, ಬ್ರಹ್ಮಕಲಶಪೂಜೆ, ನಡೆದು ಬಳಿಕ 9.20ರ ಶುಭಮುಹೂರ್ತದಲ್ಲಿ ನೂತನ ಬಿಂಬ ಶ್ರೀ ಉಳ್ಳಾಲ್ತಿ ಅಮ್ಮನವರ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ತಂಬಿಲ ಸೇವೆ, ಪ್ರಾರ್ಥನೆ, ಮಹಾಪೂಜೆ ನಡೆದು ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 7 ಕ್ಕೆ ಸಾಮೂಹಿಕ ರಂಗಪೂಜೆ ನಡೆದು ಬಳಿಕ ಮಹಾಪೂಜೆ ಅನ್ನಸಂತರ್ಪಣೆ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.