ಸಂಪ್ಯ: ಶ್ರೀ ವಿಷ್ಣುಮೂರ್ತಿ ದೈವದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವಿಷ್ಣುಮೂರ್ತಿ ದೈವದ ಬಯಲಕೋಲ, ಗುಳಿಗ ದೈವದ ನೇಮೋತ್ಸವ

 

sampya3 sampya1 sampya2ಪುತ್ತೂರು: ಸಂಪ್ಯ ಶ್ರೀ ವಿಷ್ಣುಮೂರ್ತಿ ಒತ್ತೆಕೋಲ ಸೇವಾ ಸಮಿತಿ ಮತ್ತು ಶ್ರೀ ರಕ್ತೇಶ್ವರಿ ಧರ್ಮ ನಡಾವಳಿ ಸಮಿತಿ ಆಶ್ರಯದಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ಪುನರ್ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವವು ದ.22ರಂದು ಬೆಳಿಗ್ಗೆ ಕುಕ್ಕಾಡಿ ತಂತ್ರಿ ಪ್ರೀತಮ್ ಪುತ್ತೂರಾಯವರ ನೇತೃತ್ವದಲ್ಲಿ ಉದಯಗಿರಿಯಲ್ಲಿ ನಡೆಯಿತು.

ಬೆಳಿಗ್ಗೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆದ ಬಳಿಕ ಮಕರ ಲಗ್ನ ಸುಮುಹೂರ್ತದಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ಪ್ರತಿಷ್ಠೆ, ಕಲಶಾಭಿಷೇಕ, ತಂಬಿಲ, ಆಶ್ಲೇಷಾ ಬಲಿ ತಂಬಿಲ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ಸಂಜೆ ಶ್ರೀ ರಕ್ತೇಶ್ವರಿ ದೈವದ ನರ್ತನ ಮಂಟಪಕ್ಕೆ ಪುಣ್ಯಾಹ ವಾಚನ, ಪ್ರಾಸಾದ ಶುದ್ದಿ, ವಾಸ್ತುಬಲಿ ಮುಂತಾದ ವೈದಿಕ ಕಾರ್ಯಕ್ರಮಗಳು ನಡೆಯಿತು. ನಂತರ ಶ್ರೀ ವಿಷ್ಣುಮೂರ್ತಿ ದೈವದ ಬಯಲ ಕೋಲ ಮತ್ತು ಶ್ರೀ ಗುಳಿಗ ದೈವದ ನೇಮೋತ್ಸವ ಹಾಗೂ ಅನ್ನಸಂತರ್ಪಣೆ ಜರಗಿತು. ಸಾವಿರಾರು ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಸಭೆ, ಸಾಂಸ್ಕೃತಿಕ ಕಾರ‍್ಯಕ್ರಮ: ರಾತ್ರಿ ಧಾರ್ಮಿಕ ಸಭೆ ನಡೆಯಿತು. ಸಭೆಯಲ್ಲಿ ದೈವಾರಾಧಕರ ಕೂಟ ಪುತ್ತೂರು ಕೇಂದ್ರ ಸಮಿತಿಯ ಸಂಚಾಲಕ ಡಾ| ನವೀನ್ ಕುಮಾರ್ ಮರಿಕೆಯವರು ಧಾರ್ಮಿಕ ಉಪನ್ಯಾಸ ನೀಡಿ, ದೈವಾರಾಧನೆ ಎಲ್ಲರನ್ನೂ ಒಟ್ಟುಗೂಡಿಸುತ್ತದೆ. ದೈವಾರಾಧನೆಯಿಂದ ಸಮಾಜದಲ್ಲಿ ಒಗ್ಗಟ್ಟು ಉಳಿದಿದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಜಿ.ಪಂ. ಸದಸ್ಯೆ ಶಯನಾ ಜಯಾನಂದ್, ಅಧ್ಯಕ್ಷತೆ ವಹಿಸಿದ್ದ ಧರ್ಮನಡಾವಳಿ ಸಮಿತಿಯ ಗೌರವಾಧ್ಯಕ್ಷ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ಅವರು ಸಂದರ್ಭೋಚಿತವಾಗಿ ಮಾತನಾಡಿದರು. ಧರ್ಮನಡಾವಳಿ ಸಮಿತಿಯ ಅಧ್ಯಕ್ಷ ಮಹೇಶ್ ಕಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಧರ್ಮ ನಡಾವಳಿ ಸಮಿತಿಯ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಉಪಾಧ್ಯಕ್ಷ ಸುಂದರ ಪೂಜಾರಿ ಬಡಾವು ಉಪಸ್ಥಿತರಿದ್ದರು. ಧರ್ಮ ನಡಾವಳಿ ಸಮಿತಿಯ ಉಪಾಧ್ಯಕ್ಷ ಕೃಷ್ಣ ಕೆ. ಸಂಪ್ಯ ಸ್ವಾಗತಿಸಿದರು. ಸ್ವಾಗತ ಸಮಿತಿಯ ಸದಸ್ಯ ವಿಜಯ ಬಿ.ಎಸ್. ವಂದಿಸಿದರು. ಸಮಿತಿಯ ಜೊತೆ ಕಾರ್ಯದರ್ಶಿ ಸೀತಾರಾಮ ಶೆಟ್ಟಿ ಕಂಬಳತ್ತಡ್ಡ ಕಾರ್ಯಕ್ರಮ ನಿರೂಪಿಸಿದರು.

ಸಭೆಯ ಬಳಿಕ ಚಿದಾನಂದ ಕಾಮತ್ ಕಾಸರಗೋಡು ಅವರ ನಿರ್ದೇಶನದಲ್ಲಿ ಬಾರಿಸು ಕನ್ನಡ ಡಿಂಡಿಮವ ಸಾಂಸ್ಕೃತಿಕ ವೈಭವ ನಡೆಯಿತು.

ಇಂದು ಧರ್ಮ ನಡಾವಳಿ

ಶ್ರೀ ಭೂಮಿ ತೂಕದ ದೈವ ರಕ್ತೇಶ್ವರಿಗೆ ಧರ್ಮ ನಡಾವಳಿ ದ.23ರಂದು ರಾತ್ರಿ ನಡೆಯಲಿದೆ. ಅದರ ಪೂರ್ವಭಾವಿಯಾಗಿ ಬೆಳಿಗ್ಗೆ ಸಂಪ್ಯ ಶ್ರೀ ರಕ್ತೇಶ್ವರಿ ಕಲ್ಲುರ್ಟಿ ಗುಡಿಯಿಂದ ಶ್ರೀ ದೈವದ ಭಂಡಾರ ಮೆರವಣಿಗೆಯ ಮೂಲಕ ಮಂಟಪಕ್ಕೆ ಬರುವುದು. ಮಧ್ಯಾಹ್ನದಿಂದ ರಾತ್ರಿ ತನಕ ನಿರಂತರ ಅನ್ನಸಂತರ್ಪಣೆ ಹಾಗೂ ಸಂಜೆ ಸಭಾ ಕಾರ್ಯಕ್ರಮ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.