ಡಿ.24 ರಂದು ವಳಾಲು-ಎಂಜಿರಡ್ಕ ಶ್ರೀ ಶಿವಶಕ್ತಿ ಸಂಘದ ರಜತ ಸಂಭ್ರಮ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಬಜತ್ತೂರು ಗ್ರಾಮದ ವಳಾಲು ಎಂಜಿರಡ್ಕ ಶ್ರೀ ಶಿವಶಕ್ತಿ ಸಂಘದ ರಜತ ಸಂಭ್ರಮ ಕಾರ್ಯಕ್ರಮ ದ.24ರಂದು ಬಜತ್ತೂರು ವಳಾಲು ಸರಕಾರಿ ಹಿ.ಪ್ರಾ.ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದ.24ರಂದು ಸಂಜೆ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಬಳಿಕ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮಹಾಲಕ್ಷ್ಮಿ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ರಾಧಾಕೃಷ್ಣ ಕೆ.ಎಸ್.ಕುವೆಚ್ಚಾರು ಅಧ್ಯಕ್ಷತೆ ವಹಿಸಲಿದ್ದಾರೆ. ಎಬಿವಿಪಿಯ ರಾಜ್ಯ ಉಪಾಧ್ಯಕ್ಷ ಕೇಶವ ಬಂಗೇರ ಪ್ರಧಾನ ಭಾಷಣ ಮಾಡಲಿದ್ದಾರೆ. ಬಜತ್ತೂರು ಗ್ರಾ.ಪಂ.ಅಧ್ಯಕ್ಷ ಸಂತೋಷ್ ಕುಮಾರ್ ಪಂರ್ದಾಜೆ, ಧಾರ್ಮಿಕ ಮುಖಂಡ ಧನ್ಯಕುಮಾರ್ ರೈ ಬಿಳಿಯೂರುಗುತ್ತು, ವಾಮಂಜೂರು ದೇವರಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ನವೀನ್‌ಕುಮಾರ್ ಕೊಡಿಯಾಲ್ ಬೈಲ್, ಕಟ್ಟಡ ಗುತ್ತಿಗೆದಾರ ರವಿ ಕಕ್ಯೆಪದವು, ಪ್ರಗತಿಪರ ಕೃಷಿಕ ರವಿಶಂಕರ ಕೆ ಪಿಜಕ್ಕಳ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾದ ಚಲನಚಿತ್ರ ನಟ ಕುಸಲ್ದರಸೆ ನವೀನ್ ಡಿ.ಪಡೀಲ್ ಭಾಗವಹಿಸಲಿದ್ದಾರೆ.

ಸನ್ಮಾನ, ಪ್ರತಿಭಾ ಪುರಸ್ಕಾರ: ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬಜತ್ತೂರು ಗ್ರಾಮದಲ್ಲಿ ವಾಸ್ತವ್ಯವಿರುವ ಸೇವಾನಿರತ ಹಾಗೂ ಸೇವಾನಿವೃತ್ತಿ ಹೊಂದಿದ ಸೈನಿಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬಜತ್ತೂರು ಗ್ರಾಮ ವ್ಯಾಪ್ತಿಯ ಪ್ರೌಢಶಾಲೆಗಳಲ್ಲಿ 2015-16ನೇ ಸಾಲಿನ 10 ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರವೂ ನಡೆಯಲಿದೆ. ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. 25ನೇ ವರ್ಷದ ಪ್ರಯುಕ್ತ ನಡೆದ ಮೊಸರುಕುಡಿಕೆ ಉತ್ಸವದ ವಿವಿಧ ಆಟೋಟ ಸ್ಪರ್ಧೆಗಳ ವಿಜೇತರಿಗೂ ಇದೇ ವೇಳೆ ಬಹುಮಾನ ವಿತರಣೆ ನಡೆಯಲಿದೆ.

ಯಕ್ಷಗಾನ ಬಯಲಾಟ: ರಾತ್ರಿ ಬಂಟ್ವಾಳ ಸರಪಾಡಿ ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಯವರಿಂದ ’ಅಮರಶಿಲ್ಪಿ ವೀರಶಂಭು ಕಲ್ಕುಡ ಮೈಮೆದ ಕಲ್ಕುಡ-ಕಲ್ಲುರ್ಟಿ ತುಳು ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.