ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷರಿಂದ ಗ್ರಾಮ ಭೇಟಿ  ಹಿನ್ನಲೆ- ಗೌಡ ಸಂಘದಲ್ಲಿ ಮಂಗಳೂರು ಶಾಖಾ ಮಠದ ಸ್ವಾಮೀಜಿಯವರಿಂದ ಅಂತಿಮ ಸಿದ್ಧತಾ ಸಭೆ

Puttur_Advt_NewsUnder_1
Puttur_Advt_NewsUnder_1

adi-chu

ಪುತ್ತೂರು: ಶ್ರೀ ಆದಿಚುಂಚನಗಿರಿ ಕ್ಷೇತ್ರದ 72ನೇ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳು ಧರ್ಮ ಜಾಗೃತಿ ಮೂಡಿಸಲು  ದ.26 ರಿಂದ 31ರ ತನಕ ಪುತ್ತೂರು ತಾಲೂಕಿನ ಆಯ್ದ ಗ್ರಾಮಗಳಿಗೆ ಭೇಟಿ ನೀಡಲಿರುವ ಹಿನ್ನೆಲೆ ಪೂರ್ವ ತಯಾರಿಯಾಗಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿಯವರು ದ.22ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಸಂಘದ ಪದಾಧಿಕಾರಿಗಳೊಂದಿಗೆ ಅಂತಿಮ ಸಿದ್ಧತಾ ಸಭೆ ನಡೆಸಿದರು.

ಆದಿಚುಂಚನಗಿರಿ ಕ್ಷೇತ್ರ ಸ್ವಾಮೀಜಿಯವರಿಗೆ ಪಾದಪೂಜೆ ಮಾಡುವ ಮತ್ತು ಅಲ್ಲಲ್ಲಿ ನಡೆಯುವ ಧರ್ಮ ಜಾಗೃತಿ ಸಭೆಯ ಕುರಿತು ಏನೆಲ್ಲಾ ತಯಾರಿ ಮಾಡಬೇಕೆಂಬುದನ್ನು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಚಿದಾನಂದ ಬೈಲಾಡಿ, ಪ್ರಧಾನ ಕಾರ್ಯದರ್ಶಿ ರವಿಮುಂಗ್ಲಿಮನೆ, ನಿಯೋಜಿತ ಅಧ್ಯಕ್ಷ ನಾಗಪ್ಪ ಗೌಡ ಬೊಮ್ಮೆಟ್ಟಿ, ಮಹಿಳಾ ಘಟಕದ ಅಧ್ಯಕ್ಷೆ ಗೌರಿ ಹೆಚ್, ಖಜಾಂಚಿ ವಿಶ್ವನಾಥ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಪದಾಧಿಕಾರಿಗಳು, ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.