ಉಪ್ಪಳಿಗೆ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

img_20161222_110357_2

ನಿಡ್ಪಳ್ಳಿ: ಇರ್ದೆ ಉಪ್ಪಳಿಗೆ ಸರಕಾರಿ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟ ಡಿ.22ರಂದು ನಡೆಯಿತು. ದ.ಕ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಪ್ರದೇಶಗಳಲ್ಲಿ ಕ್ರೀಡೆಗೆ  ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ. ಕೇಂದ್ರ ಸರಕಾರವು ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು ಮುಂದಿನ ಒಲಂಪಿಕ್ ಕ್ರೀಡಾಕೂಟದಲ್ಲಿ ಭಾರತ ಉತ್ತಮ ಫಲಿತಾಂಶ ಪಡೆಯುವಂತಾಗಲಿ ಎಂದು ಹೇಳಿ ಕ್ರೀಡಾಕೂಟಕ್ಕೆ ಶುಭಹಾರೈಸಿದರು.

ಉದ್ಯಮಿ ಜಯಂತ ನಡುಬೈಲು ಮಾತನಾಡಿ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿಂದ ಭಾಗವಹಿಸಿ ಉತ್ತಮ ಸಾಧನೆ ಮಾಡಿ ಊರಿಗೆ ಹಾಗು ಶಾಲೆಗೆ ಕೀರ್ತಿ ಬರುವಂತಾಗಲಿ ಎಂದು ಹೇಳಿ ಶುಭಹಾರೈಸಿದರು.

ಪುತ್ತೂರು ಶಾಸಕಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆದ ಶಕುಂತಲಾ ಟಿ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಈ ಶಾಲೆಯ ಮಕ್ಕಳು ಕ್ರೀಡೆ ಹಾಗೂ ಎಲ್ಲಾ ಚಟುವಟಿಕೆಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿನುಗುವಂತಾಗಲಿ ಇದಕ್ಕೆ ಎಲ್ಲರ ಸಹಕಾರ ಇರಲಿ ಎಂದು ಹೇಳಿ ಶುಭಹಾರೈಸಿದರು. ಪ್ರಗತಿಪರ ಕೃಷಿಕ ತುಕಾರಾಮ ಗೌಡ ರಂಗಯ್ಯಕಟ್ಟೆ  ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸ್ಥಾಪಕ ಮುಖ್ಯಗುರು ನಾರಾಯಣ ರೈ ಕುಕ್ಕುವಳ್ಳಿ, ದೇವಪ್ಪ ಗೌಡ ರಂಗಯ್ಯಕಟ್ಟೆ , ಗ್ರಾ.ಪಂ ಸದಸ್ಯ ಪ್ರಕಾಶ್ ರೈ ಬೈಲಾಡಿ, ಯುವಕ ಮಂಡಲದ ಅಧ್ಯಕ್ಷ ರಂಜಿತ್ ಬೈಲಾಡಿ, ತಾಲೂಕು ಪಂಚಾಯತ್ ಸದಸ್ಯ ರಾಧಾಕೃಷ್ಣ ಬೊರ್ಕರ್, ಅರಿಯಡ್ಕ ಗ್ರಾ.ಪಂ. ಸದಸ್ಯ ತಿಲಕ್ ರೈ ಕುತ್ಯಾಡಿ, ಮೌನೇಶ್ ವಿಶ್ವಕರ್ಮ, ನಿವೃತ್ತ ಶಿಕ್ಷಕ ದೇವಪ್ಪ ನಾಯ್ಕ ಉಪ್ಪಳಿಗೆ, ಉದ್ಯಮಿ ಮಹಮ್ಮದ್ ಕುಂಞ, ಅಕ್ಷರ ದಾಸೋಹದ ನಿರ್ದೇಶಕ ಸುರೇಶ ಕುಮಾರ್,  ವಿಠಲ ಪೂಜಾರಿ, ಗ್ರಾ.ಪಂ ಸದಸ್ಯೆ ಪುಷ್ಪಲತಾ, ಮುರಳೀಧರ ಕಲ್ಲೂರಾಯ ರಾಯರ ಮನೆ, ಪೂವಪ್ಪ ಗೌಡ ಗುಮ್ಮಟೆಗದ್ದೆ, ಉದ್ಯಮಿ ನವಾರh ಹಾಜಿ ರೆಂಜ, ಎಸ್ ಡಿಎಂಸಿ ಉಪಾಧ್ಯಕ್ಷ  ಕೃಷ್ಣಪ್ರಸಾದ್ ಅಳ್ವ  ಉಪಸ್ಥಿತರಿದ್ದರು.  ಉದ್ಯಮಿ ಜಯಂತ ನಡುಬೈಲು ಆಕರ್ಷಕ ಪಥಸಂಚಲನದ ಗೌರವ ವಂದನೆ ಸ್ವೀಕರಿಸಿದರು. ಇರ್ದೆ ದೇವಾಲಯದಿಂದ ಕ್ರೀಡಾ ಜ್ಯೋತಿಯನ್ನು ತರಲಾಯಿತು. ಜಿಲ್ಲಾ ಮಟ್ಟದ ಸ್ಪರ್ದೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ ಶಾಲಾ ನಾಯಕ ಕಾರ್ತಿಕ್. ಪಿ ಯವರನ್ನು ಶಾಸಕರು ಗೌರವಿಸಿದರು. ಕ್ರೀಡಾಳು ಮಿಥುನ್ ರಾಜ್.ಜೆ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಮುಖ್ಯ ಗುರು ನಾರಾಯಣ. ಕೆ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಮಕೃಷ್ಣ ಪಡುಮಲೆ ವಂದಿಸಿ, ಸಹ ಶಿಕ್ಷಕಿ ಗೀತಾಕುಮಾರಿ  ನಿರೂಪಿಸಿದರು. ಸಹ ಶಿಕ್ಷಕರಾದ ರಾಮಚಂದ್ರ,  ವಿದ್ಯಾಲಕ್ಷ್ಮಿ, ಸವಿತಾ,  ಸಹಾಯಕ ಮನೋಹರ   ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.