ಕುಂತೂರು ಶಾಲೆಯಲ್ಲಿ ಸೈಕಲ್ ವಿತರಣೆ

Puttur_Advt_NewsUnder_1
Puttur_Advt_NewsUnder_1

whatsapp-image-2016-12-23-at-4-56-28-pm

ಪೆರಾಬೆ: ಕುಂತೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣಾ ಕಾರ್ಯಕ್ರಮ ಡಿ.೧೭ರಂದು ನಡೆಯಿತು. ಪೆರಾಬೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ.ಸಿ.ಪಾಟಾಳಿಯವರು ಸೈಕಲ್ ವಿತರಿಸಿ ಮಾತನಾಡಿ ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡು ಉತ್ತಮ ವಿದ್ಯೆಯನ್ನು ಕಲಿತು ಒಳ್ಳೆಯ ಪ್ರಜೆಗಳಾಗಿ ಬಾಳುವಂತೆ ಕರೆ ನೀಡಿದರು. ಸೈಕಲ್ ಚಲಾಯಿಸುವಾಗ ವಹಿಸಬೇಕಾದ ಎಚ್ಚರಿಕೆಗಳ ಬಗ್ಗೆ ಕಿವಿಮಾತು ಹೇಳಿದರು. ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಶೆಟ್ಟಿ ಮತ್ತು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ನೇಮಿರಾಜ.ಎಸ್‌ರವರು ಸೈಕಲ್ ವಿತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಾಲಾ ಪ್ರಭಾರ ಮುಖ್ಯಗುರು ಸುಮಿತ್ರ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ನೀಲಮ್ಮ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.