Breaking News

ಪೆರಾಬೆ ಇಡಾಳ ಅಂಗನವಾಡಿಯಲ್ಲಿ ಬಾಲಮೇಳ

Puttur_Advt_NewsUnder_1
Puttur_Advt_NewsUnder_1

perabe-idalaಪೆರಾಬೆ: ಪೆರಾಬೆ ಗ್ರಾಮದ ಇಡಾಳ ಅಂಗನವಾಡಿ ಕೇಂದ್ರದಲ್ಲಿ ದ.19ರಂದು ಬಾಲಮೇಳ ನಡೆಯಿತು. ಪುಟಾಣಿ ಕೌಶಲಿ, ಪೆರಾಬೆ ಗ್ರಾ.ಪಂ.ಸದಸ್ಯೆ ಗಂಗಾರತ್ನ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಮೇಲ್ವಿಚಾರಕಿ ಭವಾನಿ ಎ. ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಶಾಲಾ ಮುಖ್ಯಗುರು ಮಹೇಶ್, ಗ್ರಾ.ಪಂ. ಸದಸ್ಯ ದಿನೇಶ್, ಯುವಕ ಮಂಡಲದ ಅಧ್ಯಕ್ಷ ಶೇಖರ್, ಸ್ತ್ರೀಶಕ್ತಿ ಗುಂಪಿನ ಅಧ್ಯಕ್ಷೆ ದಮಯಂತಿ, ಪುಟಾಣಿ ಕೌಶಲಿ, ಮನವಳಿಕೆ ಅಂಗನವಾಡಿ ಕಾರ್ಯಕರ್ತೆ ಮೋಹಿನಿ, ಸರೋಜ ದಾಮೋದರ ಆಲಂಕಾರು ಉಪಸ್ಥಿತರಿದ್ದರು. ಕಾರ‍್ಯಕ್ರಮದಲ್ಲಿ ಮಕ್ಕಳ ಪೋಷಕರು, ಸ್ತ್ರೀಶಕ್ತಿ ಗುಂಪಿನ ಸದಸ್ಯರು ಹಾಜರಿದ್ದರು. ಪುಟಾಣಿಗಳಿಗೆ ವಿವಿಧ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಹರಿಣಾಕ್ಷಿ ಸ್ವಾಗತಿಸಿ, ನಿರೂಪಿಸಿದರು. ಸಹಾಯಕಿ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.