ಕಾಣಿಯೂರು:ಜಿಲ್ಲಾ ಯುವಜನ ಮೇಳದ ಆಮಂತ್ರಣ ಪತ್ರ ಬಿಡುಗಡೆ ಸಾಂಸ್ಕೃತಿಕ ಜನಪದ ಕಲೆಗಳನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ- ಜಗನ್ನಾಥ ರೈ ನುಳಿಯಾಲು

 

kaniyooruಕಾಣಿಯೂರು: ನಮ್ಮ ಸಾಂಸ್ಕೃತಿಕ ಜನಪದ ಕಲೆಗಳನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಸಾಂಸ್ಕೃತಿಕ ಕಲೆಗಳಿಗೆ ಬಹಳಷ್ಟು ಪ್ರೋತ್ಸಾಹ ನೀಡಿದ ಊರು ನಮ್ಮದಾಗಿದೆ. ಜ 7ಮತ್ತು 8ರಂದು ನಡೆಯುವ ಜಿಲ್ಲಾ ಮಟ್ಟದ ಯುವಜನ ಮೇಳವು ಯಶಸ್ವಿಯಾಗಲು ಎಲ್ಲರೂ ಪ್ರೋತ್ಸಾಹ ನೀಡಬೇಕು.  ಈ ಮೂಲಕ ನಮ್ಮ ಕಲೆಗಳನ್ನು ಈ ಭಾಗದಲ್ಲಿ ಬಹಳ ವಿಜೃಂಭನೆಯಿಂದ ಅನಾವರಣಗೊಳಿಸೋಣ ಎಂದು ನಿವೃತ್ತ ಡಿವೈಎಸ್‌ಪಿ ಜಗನ್ನಾಥ ರೈ ನುಳಿಯಾಲು ಹೇಳಿದರು.

ಅವರು ಕರ್ನಾಟಕ ಸರಕಾರ, ದ.ಕ ಜಿಲ್ಲಾಡಳಿತ ಮಂಗಳೂರು, ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ ಜಿಲ್ಲೆ, ತಾಲೂಕು ಪಂಚಾಯತ್ ಪುತ್ತೂರು, ಗ್ರಾಮ ಪಂಚಾಯತ್ ಕಾಣಿಯೂರು ಮತ್ತು ಬೆಳಂದೂರು, ದ.ಕ ಜಿಲ್ಲಾ ಯುವಜನ ಒಕ್ಕೂಟ, ತಾಲೂಕು ಯುವಜನ ಒಕ್ಕೂಟ ಪುತ್ತೂರು, ಪ್ರಗತಿ ಕಲಾ ಮತ್ತು ಕ್ರೀಡಾ ಸಂಘ ಕಾಣಿಯೂರು, ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರು  ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಣಿಯೂರು ವಿಶ್ವಜ್ಞ ಯುವಕ ಮಂಡಲದ ಆತಿಥ್ಯದಲ್ಲಿ ಜ.7, 8ರಂದು ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಯುವಜನ ಮೇಳ- 2016ರ ಆಮಂತ್ರಣ ಪತ್ರವನ್ನು ದ.24ರಂದು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಅನಾವರಣಗೊಳಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಜನ ಮೇಳ ಸ್ವಾಗತ ಸಮಿತಿಯ ಅಧ್ಯಕ್ಷರೂ ಆಗಿರುವ ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿಯವರು ವಹಿಸಿದ್ದರು. ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ರೈ ಸೂಡಿಮುಳ್ಳು, ಪುತ್ತೂರು ಯುವಸಬಲೀಕರಣ ಮತ್ತು ಕ್ರೀಡಾಧಿಕಾರಿ ಮಾಮಚ್ಚನ್, ಸುಳ್ಯ ಯುವಸಬಲೀಕರಣ ಮತ್ತು ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ, ಕಾಣಿಯೂರು ವಿಶ್ವಜ್ಞ ಯುವಕ ಮಂಡಲದ ಗೌರವಾಧ್ಯಕ್ಷ ಜನಾರ್ದನ ಆಚಾರ್ಯ ಕಾಣಿಯೂರು, ಕಾಣಿಯೂರು ಕ್ಲಸ್ಟರ್ ಸಿಆರ್‌ಪಿ ಜಯಂತ್ ವೈ, ಕಾಣಿಯೂರು ಸ..ಪ್ರಾ.ಶಾಲಾ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ನಾರಾಯಣ ಭಟ್, ಪ್ರಗತಿ ವಿದ್ಯಾಸಂಸ್ಥೆಯ ಆಡಳಿತ ಸುತಿ ಉಪಾಧ್ಯಕ್ಷ ವಿಶ್ವನಾಥ ರೈ ಮಾದೋಡಿ, ಸದಸ್ಯರುಗಳಾದ ನಾಗೇಶ್ ರೈ ಮಾಳ, ಚಂದ್ರಹಾಸ್ ರೈ,  ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಗೌರವಾಧ್ಯಕ್ಷ ಎಂಜೀರು ಪದ್ಮನಾಭ ರೈ ಎಂಜೀರು, ಅಧ್ಯಕ್ಷ ರಮೇಶ್ ಬೆಟ್ಟ, ಕಾಣಿಯೂರು ಕಣ್ವಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಮಮತಾ ಲೋಕೇಶ್ ಅಗಳಿ, ಕಾರ್ಯದರ್ಶಿ ನಾಗವೇಣಿ ಬೆದ್ರಾಜೆ, ಯುವಜನ ಒಕ್ಕೂಟದ ಕಾರ್ಯದರ್ಶಿ ಸುಬ್ರಹ್ಮಣ್ಯ ಕರುಂಬಾರು ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರಗತಿ ವಿದ್ಯಾಸಂಸ್ಥೆಯ ಮುಖ್ಯಗುರು ಗಿರಿಶಂಕರ ಸುಲಾಯ ಸ್ವಾಗತಿಸಿ, ಆಡಳಿತಾಧಿಕಾರಿ ವಸಂತ ರೈ ಕಾರ್ಕಳ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.